ಬಿಜೆಪಿಯಿಂದ ದೇಶದ ಅಭಿವೃದ್ಧಿ

ಕೆ.ಆರ್.ನಗರ: ಗಾಂಧೀಜಿ ಅವರ ರಾಮರಾಜ್ಯದ ಕನಸು ನನಸಾಗಬೇಕಾದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಹೊಸಹಳ್ಳಿ ವೆಂಕಟೇಶ್ ಹೇಳಿದರು.

ಪಟ್ಟಣದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಅವರು, ದೇಶದ ರೈತರು ಮತ್ತು ಬಡವರ ಹಿತಕಾಯಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್‌ನವರು ಸುಮಲತಾರಿಗೆ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಅಲ್ಲದೆ ವಿರೋಧ ಪಕ್ಷದವರ ಹೇಳಿಕೆಗಳಿಗೆ ಕಿವಿಗೊಡಬಾರದು ಎಂದು ಹೇಳಿದರು.

ಪಕ್ಷದ ರಾಜ್ಯ ಪರಿಷತ್ ಸದಸ್ಯ ಗೋಪಾಲ್‌ರಾವ್, ಜಿಲ್ಲಾ ಉಪಾಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ವಕ್ತಾರ ಎಚ್.ಪಿ.ಗೋಪಾಲ್, ತಾಲೂಕು ಪ್ರಧಾನ ಕಾರ್ಯದರ್ಶಿ ಗೋಪಾಲ್‌ರಾಜ್, ಯುವ ಮೋರ್ಚಾ ಅಧ್ಯಕ್ಷ ತಿಲಕ್, ಮುಖಂಡರಾದ ಸಿದ್ದರಾಮಯ್ಯ, ಮಿರ್ಲೆ ಮಂಜು, ಮಾರ್ಕಂಡಯ್ಯ, ಮಧುವನಹಳ್ಳಿ ತಮ್ಮಣ್ಣ ಇತರರು ಹಾಜರಿದ್ದರು.