More

    ಒಗ್ಗಟ್ಟಿನಿಂದ ದೇಶದ ಅಭಿವೃದ್ಧಿ

    ಉಡುಪಿ: ಪ್ರಜಾಪ್ರಭುತ್ವ ಉಳಿಯಲು ಮತ್ತು ದೇಶ ಕಟ್ಟಬೇಕಾದರೆ ಸಮುದಾಯಗಳು ನಡುವೆ ಕಂದಕ ಸೃಷ್ಟಿಸದೆ ನಾವೆಲ್ಲ ಒಗ್ಗಟ್ಟಾಗಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಪ್ರಾಧ್ಯಾಪಕ ಡಾ.ಎಂ.ಚಂದ್ರ ಪೂಜಾರಿ ಹೇಳಿದರು.

    ಅಂಬಾಗಿಲಿನ ಅಮೃತ್‌ಗಾರ್ಡನ್‌ನಲ್ಲಿ ಶನಿವಾರ ಜಿಲ್ಲಾ ಮುಸ್ಲಿಂ ಒಕ್ಕೂಟದ ವತಿಯಿಂದ ಜರುಗಿದ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ, ಧರ್ಮ, ಸಮುದಾಯಗಳ ನಡುವೆ ಜನಸಾಮಾನ್ಯರು ಕಚ್ಚಾಟ ಮಾಡುತ್ತಿರುವುದರಿಂದ ಅಯೋಗ್ಯರು ರಾಜಕಾರಣ ಮಾಡುತ್ತಿದ್ದಾರೆ. ಅಯೋಗ್ಯ ಚುನಾಯಿತ ಜನಪ್ರತಿನಿಧಿಗಳಿಂದಾಗಿ ಪ್ರಜಾಪ್ರಭುತ್ವ ಬುನಾದಿ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ನಾವು ಜಾತಿ, ಧರ್ಮದ ವ್ಯಾಮೋಹ ಬಿಟ್ಟು ಅರ್ಹರನ್ನು ಆಯ್ಕೆ ಮಾಡಬೇಕು ಎಂದರು.

    ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಹಿರಿಯ ಚಿಂತಕ ಜಿ.ರಾಜಶೇಖರ್ ಅವರಿಗೆ ಮಾನವ ರತ್ನ ಪ್ರಶಸ್ತಿ ಹಾಗೂ ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮೊಹಮ್ಮದ್ ಇಸ್ಮಾಈಲ್ ತೋನ್ಸೆ ಅವರಿಗೆ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ಸಾಧಕರಾದ ವಿಲಿಯಂ ಮಾರ್ಟಿಸ್, ಜನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಮಲ್ಪೆ ಮತ್ಸೊೃೀದ್ಯಮಿ ಸಾಧು ಸಾಲಿಯಾನ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಠಲ್‌ದಾಸ್ ಬನ್ನಂಜೆ, ಜಿಲ್ಲಾ ಮುಸ್ಲಿಂ ಒಕ್ಕೂಟದ ಪ್ರಥಮ ಅಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಆಶಾನಿಲಯ ವಿಶೇಷ ಶಿಕ್ಷಣ ಸಂಸ್ಥೆ ಮುಖ್ಯ ಶಿಕ್ಷಕಿ ಶಶಿಕಲಾ ಬೆಂಜಮಿನ್ ಕೋಟ್ಯಾನ್, ಕಾರ್ಕಳದ ಸಮಾಜ ಸೇವಕಿ ಆಯಿಶಾ ಕಾರ್ಕಳ, ಕೋಡಿ-ಕುಂದಾಪುರದ ಸಮಾಜಸೇವಕಿ ಲಕ್ಷ್ಮೀಬಾಯಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

    ಪತ್ರಕರ್ತ ಅಬ್ದುಸ್ಸಲಾಂ ಪುತ್ತಿಗೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಜಿಪಂ ಮಾಜಿ ಅಧ್ಯಕ್ಷ ರಾಜು ಪೂಜಾರಿ ಬೈಂದೂರು, ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ ಶೆಣೈ ಮಾತನಾಡಿದರು. ಸಮಾಜಿಕ ಕಾರ್ಯಕರ್ತ ಕಾಪು ಲೀಲಾಧರ ಶೆಟ್ಟಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಹಾಜಿ ಅಬ್ದುಲ್ಲಾ ನಾವುಂದ, ಕಾಸಿಂ ಬಾರ್ಕೂರು, ಎಂ.ಪಿ.ಮೊದಿನಬ್ಬ ಹಾಗೂ ಅಶ್ಫಾಕ್ ಅಹ್ಮದ್ ಕಾರ್ಕಳ ಉಪಸ್ಥಿತರಿದ್ದರು. ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಪ್ರಾಸ್ತಾವಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೌಲಾ ಸ್ವಾಗತಿಸಿದರು. ಕೋಶಾಧಿಕಾರಿ ಇಕ್ಬಾಲ್ ಎಸ್.ಕಟಪಾಡಿ ವಂದಿಸಿದರು. ಸಲಾಹುದ್ದೀನ್ ಅಬ್ದುಲ್ಲಾ, ಅನ್ವರ್ ಅಲಿ ಕಾಪು ಪ್ರಶಸ್ತಿ ಪತ್ರ ವಾಚಿಸಿದರು. ಅಬ್ದುರ್ರಝಾಕ್ ಅನಂತಾಡಿ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts