ಸಮನ್ವಯದಿಂದ ಕೆಲಸ ಮಾಡಿದರೆ ಗ್ರಾಮದ ಅಭಿವೃದ್ಧಿ

ಬಾಳೆಹೊನ್ನೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲ ಅಧಿಕಾರಿಗಳು ಗ್ರಾಪಂನೊಂದಿಗೆ ಸೇರಿ ಸಮನ್ವಯದಿಂದ ಕೆಲಸ ಮಾಡಿದರೆ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಗ್ರಾಪಂ ಅಧ್ಯಕ್ಷ ಸದಾಶಿವ ಆಚಾರ್ಯ ಹೇಳಿದರು.
ಪಟ್ಟಣದ ಬಿ.ಕಣಬೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಗ್ರಾಪಂ ಮಟ್ಟದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಗ್ರಾಪಂ ಮಟ್ಟದ ಕೆಡಿಪಿ ಸಭೆ ನಡೆಸುತ್ತಿದ್ದು, ಅಧಿಕಾರಿಗಳಿಂದ ಗ್ರಾಮದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಕ್ರಮಗಳು, ಗ್ರಾಮದ ಸಮಸ್ಯೆ, ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.
ಪಟ್ಟಣದಲ್ಲಿ ಬಿಡಾಡಿ ದನಗಳು ಹಾಗೂ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು ಬಿಡಾಡಿ ದನಗಳನ್ನು ಗೋ ಶಾಲೆಗೆ ಸಾಗಿಸಲಾಗುವುದು. ನಾಯಿಗಳು ಹಿಡಿಯಲು ಕ್ರಮಕೈಗೊಂಡ ಕ್ರಮಕ್ಕೆ ವಿರುದ್ಧವಾಗಿ ಪ್ರಾಣಿ ದಯಾ ಸಂಘದವರು ದೂರು ನೀಡಿದ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿಲ್ಲ ಎಂದರು.
ಡಿಆರ್‌ಎ್ಒ ಆದಿತ್ಯ ರಾವ್ ಮಾತನಾಡಿ, ಈ ಭಾರಿ ಗಾಳಿ, ಮಳೆಯಿಂದಾಗಿ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಹೆಚ್ಚು ಮರಗಳು ಬಿದ್ದು ಅಪಾರ ಹಾನಿಯಾಗಿದೆ. ಮಠ ರಸ್ತೆಯಲ್ಲಿ ಖಾಸಗಿ ಜಾಗದಲ್ಲಿದ್ದ ಸಾಗುವಾನಿ ಮರ ಬಿದ್ದು 25ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ತುಂಡಾಗಿಸಮಸ್ಯೆ ಉಂಟಾಗಿತ್ತು. ಬಿದ್ದ ಮರಗಳನ್ನು ತ್ವರಿತವಾಗಿ ತೆರವುಗೊಳಿಸಲಾಗಿದೆ. ಕಾಡಾನೆ ಓಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮ ಲೆಕ್ಕಾಧಿಕಾರಿ ಸಮೀಕ್ಷಾ ಮಾತನಾಡಿ, ಈ ಬಾರಿ ಮಳೆಯಿಂದ 9 ಮನೆಗಳು ಕುಸಿದಿದ್ದು ಪರಿಹಾರ ವಿತರಿಸಲಾಗಿದೆ. ಕಾಂಪೌಂಡ್ ಬಿದ್ದ ಬಗ್ಗೆ ಪರಿಹಾರ ನೀಡಲು ಸರ್ಕಾರ ಆದೇಶ ನೀಡಿಲ್ಲ ಎಂದು ಸಭೆಗೆ ತಿಳಿಸಿದರು. ಆರೋಗ್ಯ ಇಲಾಖೆ ಸುಚಕ್ಷಣಾಧಿಕಾರಿ ವಿಜಯಲಕ್ಷ್ಮೀ ಮಾತನಾಡಿ, ಡೆಂೆ ಸಂಬಂಧ ಪ್ರತಿ ಮನೆ ಮನೆಗೂ ತೆರಳಿ ರೋಗದ ಬಗ್ಗೆ ಮಾಹಿತಿ ಹಾಗೂ ಮುನ್ನೆಚ್ಚರಿಕೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.
ಗ್ರಾಪಂ ಉಪಾಧ್ಯಕ್ಷೆ ರಂಜಿತಾ, ಉಪ ತಹಸೀಲ್ದಾರ್ ಹೇಮಾ, ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಬಿಎಚ್.ಕೃಷ್ಣಮೂರ್ತಿ, ಕೃಷಿ ಇಲಾಖೆ ಅಧಿಕಾರಿ ರಾಕೇಶ್, ಪಿಡಿಒ ಕಾಶಪ್ಪ, ಕಾರ್ಯದರ್ಶಿ ರಾಮಪ್ಪ ಮತ್ತಿತರರು ಹಾಜರಿದ್ದರು.

Share This Article

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…