ಆನಂದ್ ಸಿ.ಕುಂದರ್‌ಗೆ ಅಭಿವೃದ್ಧಿ ಹರಿಕಾರ ಪ್ರಶಸ್ತಿ

anand c kundar
ಆನಂದ್ ಕುಂದರ್
Published on

ಕೋಟ: ಸರ್ಕಾರಿ ಶಾಲಾ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ಕೊಡಮಾಡುವ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಆಯ್ಕೆಯಾಗಿದ್ದಾರೆ. ಅವರು ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳಿಗೆ ಅಗತ್ಯತೆಯನ್ನು ಗಮನಿಸಿ ಅತೀ ದೊಡ್ಡ ಮಟ್ಟದಲ್ಲಿ ಸಹಕಾರ ನೀಡುವುದರ ಜತೆಗೆ ಪ್ರತಿವರ್ಷ ಗೀತಾನಂದ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ನೋಟ್‌ಬುಕ್ ವಿತರಣೆ ಮಾಡುತ್ತಿದ್ದಾರೆ. ಅಲ್ಲದೇ ಸ್ಕೂಲ್, ಆಯುರ್ವೇದ ಮೆಡಿಕಲ್ ಕಾಲೇಜು ಸ್ಥಾಪಿಸಿ ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗುವ ಅವಕಾಶ ಮಾಡಿ ಕೊಟ್ಟಿದ್ದಾರೆ. ಸೆ.29ರಂದು ಬೆಳಗ್ಗೆ 10ಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net