ಅರಸೀಕೆರೆ ಗ್ರಾಮಾಂತರ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಕೆಲವರು ಟೀಕೆ ಮಾಡುತ್ತಾರೆ. ಆದರೆ, ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಲೇ ಇವೆ ಎಂದು ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಸಮರ್ಥಿಸಿಕೊಂಡರು.
ತಾಲೂಕಿನ ಕಸಬಾ ಹೋಬಳಿ ಯಳವಾರೆ ಗ್ರಾಮದ ಹುಚ್ಚಮ್ಮದೇಗುಲ ಆವರಣದಲ್ಲಿ ಭಾನುವಾರ ಭೋಜನ ಮಂದಿರದ ಅಡುಗೆ ಮನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಹುಚ್ಚಮ್ಮ ದೇಗುಲದಲ್ಲಿ ಪ್ರತಿ ಅಮಾವಾಸ್ಯೆಯಂದು ಬರುವ ಮೂರರಿಂದ ನಾಲ್ಕು ಸಾವಿರಭಕ್ತರಿಗೆ ಅನ್ನ ಸಂತರ್ಪಣೆ ಮಾಡಲು ಈ ಭೋಜನ ಮಂದಿರ ಅತ್ಯವಶ್ಯಕ ಎಂದರು.
ಅಧಿಕಾರ ಶಾಶ್ವತವಲ್ಲ, ನಾವು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ದೇನೆ ಎಂಬುದು ಮುಖ್ಯ ಎಂದು ಹೇಳಿದರು.
ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಶೇಖರ್, ಮುಖಂಡರಾದ ಕೇಶವಣ್ಣ, ನಾಗರಾಜು, ಬೈರೇಶ್, ಪಟೇಲ್ ಮಂಜಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಅಭಿವೃದ್ಧಿ ಕಾಮಗಾರಿ ನಡೆಯುತ್ತಲೇ ಇವೆ

You Might Also Like
ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks
ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು. ತುಪ್ಪ ಹಲವು…
ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips
ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…
ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol
Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…