More

    ಬಡವರ ಸೇವೆಗೆ ಸಮಯ ಮೀಸಲಿಡಿ

    ಮುದ್ದೇಬಿಹಾಳ, ಜಯಂತ ಪೂಜಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,
    ಮುದ್ದೇಬಿಹಾಳ: ಧರ್ಮಸ್ಥಳ ಸಂಸ್ಥೆಯಿಂದ ಸಹಾಯ ಪಡೆದುಕೊಳ್ಳುವ ವಿದ್ಯಾರ್ಥಿಗಳು ತಮಗೆ ಉದ್ಯೋಗ ದೊರೆತಾಗ ಬಡವರಿಗೆ ಸೇವೆ ಒದಗಿಸುವ ಕಾರ್ಯ ಮಾಡಬೇಕು ಎಂಬುದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ವೀರೇಂದ್ರ ಹೆಗ್ಗಡೆ ಅವರ ಆಶಯವಾಗಿದೆ ಎಂದು ಯೋಜನೆ ಪ್ರಾದೇಶಿಕ ಅಧಿಕಾರಿ ಜಯಂತ ಪೂಜಾರಿ ಹೇಳಿದರು.

    ಪಟ್ಟಣದ ಶ್ರೀಕೃಷ್ಣಾ ಮಂಗಲಭವನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ಭಾನುವಾರ ಹಮ್ಮಿಕೊಂಡಿದ್ದ ಸುಜ್ಞಾನ ನಿಧಿ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಎಂಬಿಬಿಎಸ್, ನರ್ಸಿಂಗ್, ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳಿಗೆ ಆಯ್ಕೆಯಾದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ನಮ್ಮ ಸಂಸ್ಥೆಯ ಮುಖ್ಯಸ್ಥರ ಆದೇಶದಂತೆ ಮಾಡಲಾಗುತ್ತಿದೆ. ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಂಡು ಮುಂದೊಂದು ದಿನ ತಾವು ವೈದ್ಯರಾಗಿಯೋ, ಇಂಜಿನಿಯರ್ ಆಗಿಯೋ, ನರ್ಸಿಂಗ್ ಅಧಿಕಾರಿಗಳಾಗಿ ಸೇವೆ ಸಲ್ಲಿಸುವಂತಾದಾಗ ಬಡವರ ಸೇವೆಯನ್ನು ಉಚಿತವಾಗಿ ಮಾಡಿ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

    ಮುದ್ದೇಬಿಹಾಳ ತಾಲೂಕು ಯೋಜನಾಧಿಕಾರಿ ನಾಗೇಶ ಎನ್.ಪಿ ಮಾತನಾಡಿದರು. 41 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಯೋಜನೆಯಡಿ ಸ್ಕಾಲರ್‌ಶಿಪ್ ಪತ್ರಗಳನ್ನು ವಿತರಣೆ ಮಾಡಲಾಯಿತು. ಯೋಜನಾಧಿಕಾರಿ ಪ್ರದೀಪ ಆರ್. ಇದ್ದರು. ನಿಂಗನಗೌಡ ಪಾಟೀಲ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts