ಭೀಮನ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತ‌ಸಾಗರ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಭೀಮನ ಅಮಾವಾಸ್ಯೆ ಪ್ರಯುಕ್ತ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಅಮಾವಾಸ್ಯೆ ಹಿನ್ನೆಲೆ ದೇಗುಲದ ಪ್ರಾಂಗಣಕ್ಕೆ ಹಣ್ಣು-ತರಕಾರಿಗಳಿಂದ ಅಲಂಕಾರ ಮಾಡಲಾಗಿದೆ. ಭಾನುವಾರದಿಂದಲೇ ಮಾದಪ್ಪನ ದರ್ಶನಕ್ಕೆ ಭಕ್ತರು ಆಗಮಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚಿನ ಭಕ್ತರ ಆಗಮನದ ನಿರೀಕ್ಷೆಯಿದೆ. ಮಾದಪ್ಪನ ಬೆಟ್ಟದಲ್ಲಿ ಎತ್ತ ನೋಡಿದರತ್ತ ಭಕ್ತ ಸಮೂಹ ಕಾಣುತ್ತಿದ್ದು, ಭಕ್ತರ ಅನುಕೂಲಕ್ಕಾಗಿ 300ಕ್ಕೂ ಅಧಿಕ ಹೆಚ್ಚುವರಿ … Continue reading ಭೀಮನ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತ‌ಸಾಗರ