ಐತಿಹಾಸಿಕ ಗರಡಿಗೆ ಭಕ್ತರ ಸಹಕಾರ

brahmakalasha
ಚಾರ ಮೇಲ್ಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಶಿಲಾಮಯ ಶಿವರಾಯ ಗರಡಿ ಪುನಃ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
Published on

ಹೆಬ್ರಿ: ತುಳುನಾಡಿನ ವೀರಪುರುಷರು ಕೋಟಿ ಚೆನ್ನಯರು. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ತಮ್ಮ ಕಾರ್ಯ ಸಾಧನೆಯಿಂದ ದೈವತ್ವಕ್ಕೆ ಏರಿದವರು. ಅಂದು ಸ್ಥಾಪಿಸಿದ 66 ಮೂಲ ಗರಡಿಗಳಲ್ಲಿ ಇದು ಒಂದು. ಸುಮಾರು 475 ವರ್ಷಗಳ ಇತಿಹಾಸವಿರುವ ಗರಡಿ ಬ್ರಹ್ಮಕಲಶೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನೀರೆ ಕೃಷ್ಣಶೆಟ್ಟಿ ಹೇಳಿದರು.

ಚಾರ ಮೇಲ್ಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಶಿಲಾಮಯ ಶಿವರಾಯ ಗರಡಿ ಪುನಃ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಏ.1ರಿಂದ 9ರವರೆಗೆ ನಡೆಯಲಿದ್ದು, ಗರಡಿ ವಠಾರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.

ಗೌರವಾಧ್ಯಕ್ಷ ಬಿ.ಹರ್ಷ ಶೆಟ್ಟಿ, ಆನುವಂಶಿಕ ಮೊಕ್ತೇಸರ ಸುರೇಶ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಸನ್ನಕುಮಾರ್ ಶೆಟ್ಟಿ, ಆರ್ಥಿಕ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ವಾದಿರಾಜ ಶೆಟ್ಟಿ, ಕೋಶಾಧಿಕಾರಿ ರಮಾಕಾಂತ್ ಕಾಮತ್, ಪುರೋಹಿತ ಸುಬ್ರಹ್ಮಣ್ಯ ಹೇರಳೆ, ಲಕ್ಷ್ಮಣ ಪೂಜಾರಿ, ಸುಧಾಕರ ಪೂಜಾರಿ, ಪ್ರಮುಖರಾದ ದಿನೇಶ್ ಶೆಟ್ಟಿ, ಮಿಥುನ್ ಶೆಟ್ಟಿ, ಅಣ್ಣಪ್ಪ ಕುಲಾಲ್ ಮಂಡಾಡಿಜೆಡ್ಡು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net