More

    ತುಂಗಭದ್ರೆಯಲ್ಲಿ ಮಿಂದೆದ್ದ ಭಕ್ತರು

    ಮುಂಡರಗಿ: ತಾಲೂಕಿನ ಸುಕ್ಷೇತ್ರ ಶಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವಸ್ಥಾನ ಎದುರಿನ ತುಂಗಭದ್ರಾ ನದಿಯಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸೋಮವಾರ ಸಾವಿರಾರು ಭಕ್ತರು ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದುಕೊಂಡರು.
    ಪುಣ್ಯಸ್ನಾನದ ನಂತರ ಭಕ್ತ ಸಮೂಹವು ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸರದಿಯಲ್ಲಿ ತೆರಳಿ ಶ್ರೀ ವೀರಭದ್ರೇಶ್ವರ ದೇವರ ದರ್ಶನ ಪಡೆದು ಕೃತಾರ್ಥರಾದರು. ಇನ್ನೂ ಅನೇಕರು ಕೊರ್ಲಹಳ್ಳಿ ಸಮೀಪದ ಮದಲಗಟ್ಟ ಶ್ರೀ ಆಂಜನೇಯ ದೇವಸ್ಥಾನ ಮುಂಭಾಗದ ತುಂಗಭದ್ರಾ ನದಿಯಲ್ಲಿ ಪವಿತ್ರಸ್ನಾನ ಮಾಡಿ ನಂತರ ಆಂಜನೇಯಸ್ವಾಮಿ ದರ್ಶನ ಪಡೆದರು.

    ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಬಿದರಹಳ್ಳಿಯ ಶ್ರೀ ರೇಣುಕಾದೇವಿ ದೇವಸ್ಥಾನ, ಗೊಮ್ಮಗೋಳದ ಶ್ರೀ ಗೋಣಿಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದುಕೊಂಡರು. ಸಂಕ್ರಾಂತಿ ಹಿನ್ನೆಲೆಯಲ್ಲಿ ಅನೇಕರು ತುಂಗಭದ್ರಾ ನದಿ ಭಾಗದ ವಿವಿಧ ಕಡೆಗಳಲ್ಲಿ ಪುಣ್ಯಸ್ನಾನ ಮುಗಿಸಿ ದೇವರ ದರ್ಶನ ಪಡೆದ ನಂತರ ಮನೆ ಮಂದಿಯೆಲ್ಲ ಒಂದೆಡೆ ಕುಳಿತು ಎಳ್ಳುರೊಟ್ಟಿ, ಜೋಳದ ರೊಟ್ಟಿ, ಚಪಾತಿ, ನಾನಾ ತರಹದ ಪಲ್ಯೆ, ಎಳ್ಳುಹೋಳಿಗೆ, ಶೇಂಗಾ ಹೋಳಿಗೆ, ರವೆ ಉಂಡಿ, ಮೊಸರನ್ನ ಹಾಗೂ ವಿವಿಧ ಬಗೆಯ ಭೋಜನ ಸವಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts