25.1 C
Bangalore
Friday, December 6, 2019

ಕೊಲ್ಲೂರಿನಲ್ಲಿ ಭಕ್ತ ಸಾಗರ; ಕೇರಳಿಗರೂ ಮತ್ತೆ ಅಮ್ಮನ ದರ್ಶನಕ್ಕೆ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಕೊಲ್ಲೂರು: ಮೂರು ತಿಂಗಳ ಬಳಿಕ ಪ್ರಸಕ್ತ ಕೊಲ್ಲೂರು ದೇವಳಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಶುಕ್ರವಾರ ಮೊಹರಂ ನಿಮಿತ್ತ ರಜೆ, ಶನಿವಾರ ಹಾಗೂ ಭಾನುವಾರವೂ ರಜೆ ಇರುವ ಕಾರಣ, ಕ್ಷೇತ್ರಕ್ಕೆ ಜನಸಾಗರವೇ ಹರಿದುಬರುತ್ತಿದೆ.

ಗುರುವಾರ ರಾತ್ರಿಯಿಂದ ಹೊರರಾಜ್ಯದ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದು ಶುಕ್ರವಾರ ಬೆಳಗಿನ ಜಾವ ಕಿ.ಮೀ.ಗಟ್ಟಲೆ ಉದ್ದದ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು. ಸೇವಾ ಚೀಟಿ ಪಡೆಯಲು ಹಾಗೂ ವಿದ್ಯಾರಂಭಕ್ಕೂ ನೂಕುನುಗ್ಗಲು ಉಂಟಾಗಿತ್ತು. ದೇವಳದ ಹೊರ ಪ್ರಾಂಗಣದಲ್ಲಿ ಸಮೂಹ ಭಜನೆ, ಸಾಮೂಹಿಕ ಸ್ತೋತ್ರಪಠಣ ಕೇಳಿಬರುತ್ತಿತ್ತು.

ಅಧಿಕ ಮಳೆ ಹಾಗೂ ಭೂಕುಸಿತ ಪರಿಣಾಮ ಸಂಪೂರ್ಣ ನಲುಗಿದ್ದ ಕೇರಳಿಗರು ಮೂರು ತಿಂಗಳಿಂದ ಕ್ಷೇತ್ರದಿಂದ ದೂರ ಉಳಿದಿದ್ದರು. ಈಗ ಕೇರಳ ಸ್ವಲ್ಪಮಟ್ಟಿಗೆ ಸುಧಾರಿಸಿಕೊಂಡಿದ್ದು, ಕೇರಳಿಗರು ಮತ್ತೆ ಬರಲಾರಂಭಿಸಿದ್ದಾರೆ. ಮೂರು ದಿನಗಳಿಂದ ಕೊಲ್ಲೂರಿಗೆ ಆಗಮಿಸುತ್ತಿರುವ ಮಲಯಾಳಿಗರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದು, ಸೇವೆ ಸಲ್ಲಿಸುತ್ತಿದ್ದಾರೆ. ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ವ್ಯಾಪಾರವಿಲ್ಲದೆ, ಕಳೆಗುಂದಿದ ಪೇಟೆಯಲ್ಲಿ ಈಗ ವ್ಯವಹಾರ ಚುರುಕಾಗಿದೆ. ಎಲ್ಲ ವಸತಿಗೃಹಗಳು ಭಕ್ತರಿಂದ ತುಂಬಿತುಳುಕುತ್ತಿದೆ. ಭಕ್ತರ ಅನುಕೂಲಕ್ಕಾಗಿ ದೇವಳದ ಆಡಳಿತ ಮಂಡಳಿ ಎಲ್ಲ ರೀತಿಯ ವ್ಯವಸ್ಥೆ ಮಾಡಿದೆ.

ಕುಡಿಯುವ ನೀರಿಗೆ ಸಮಸ್ಯೆ 

ಈ ಬಾರಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಕೊಲ್ಲೂರಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಕಂಡುಬಂದಿದೆ. ಕೊಲ್ಲೂರಿನ ಒಂದು ವಸತಿಗೃಹಕ್ಕೆ ಶುಕ್ರವಾರ ಟ್ರ್ಯಾಕ್ಟರ್​ನಲ್ಲಿ ನೀರು ಸಾಗಿಸುತ್ತಿರುವುದು ಕಂಡುಬಂತು. ಮಳೆಗಾಲ ಮುಗಿಯುವ ಮೊದಲೇ ಬೇಸಿಗೆಯನ್ನೂ ಮೀರಿಸುವಂಥ ಅತಿಯಾದ ಬಿಸಿಲಿನ ಝಳಕ್ಕೆ ನೀರು ಆವಿಯಾಗುತ್ತಿದ್ದು, ಸೌಪರ್ಣಿಕ, ಕಾಶಿಹೊಳೆಯಲ್ಲಿ ದಿನೇದಿನೇ ನೀರು ಕಡಿಮೆಯಾಗುತ್ತಿದೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...