More

    ದೊಡವಾಡ: ಭಕ್ತಿಯ ಮೂಲಕ ಜ್ಞಾನದ ಬೆಳಕು ಕಾಣಬೇಕು

    ದೊಡವಾಡ: ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಸತ್ಯ, ನಿಷ್ಠೆ, ವಿಶ್ವಾಸ, ನಂಬಿಕೆ, ಪ್ರಾಮಾಣಿಕತೆ, ಶ್ರದ್ಧೆ, ಭಕ್ತಿಯ ಮೂಲಕ ಜ್ಞಾನದ ಬೆಳಕು ಕಾಣಬೇಕು. ಆತ್ಮ ವಿಶ್ವಾಸದ ಮೂಲಕ ದೇವರನ್ನು ಒಲಿಸಿಕೊಳ್ಳಬೇಕು ಎಂದು ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ನುಡಿದರು.

    ದೊಡವಾಡ ಗ್ರಾಮದ ಹಿರೇಮಠದ ಶ್ರೀ ಜಡಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿಯವರ 96 ದಿನಗಳ ಮೌನ ತಪೋನುಷ್ಠಾನ ಮಂಗಲ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಬಳಿಕ ಆಯೋಜಿಸಿದ್ದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀಶೈಲ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ಮಾತನಾಡಿ, ಸ್ವಾಮೀಜಿಗಳಾದವರು ಪೂಜಾನುಷ್ಠಾನದಂತಹ ವ್ರತಾಚರಣೆ ಕೈಗೊಳ್ಳುವುದು ಶ್ರೇಷ್ಠ ಕಾರ್ಯ. ಜನರಿಗೆ ಒಳಿತಾಗಲು, ಲೋಕ ಕಲ್ಯಾಣದ ಉದ್ದೇಶದಿಂದ ಮೌನ ತಪೋನುಷ್ಠಾನ ಪೂಜೆ ಕೈಗೊಂಡಿರುವ ದೊಡವಾಡ ಹಿರೇಮಠದ ಪಟ್ಟಾಧ್ಯಕ್ಷ ಜಡಿಸಿದ್ದೇಶ್ವರ ಶ್ರೀಗಳ ಕಾರ್ಯ ಶ್ಲಾಘನೀಯ ಎಂದರು. ಹಲವು ಸ್ವಾಮೀಜಿಗಳು, ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡರ, ಮಹಾದೇವಪ್ಪ ಯಾದವಾಡ, ಮಾಜಿ ಶಾಸಕರಾದ ಜಗದೀಶ ಮೆಟಗುಡ್ಡ ಇದ್ದರು. ಮಾಜಿ ಶಾಸಕರಾದ ಡಾ. ವಿಶ್ವನಾಥ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಭಕ್ತರು ಪಾಲ್ಗೊಂಡಿದ್ದರು.

    ಪಲ್ಲಕ್ಕಿ ಉತ್ಸವ ಸಂಭ್ರಮ: ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಶ್ರೀಮದ್ ಉಜ್ಜಯಿನಿ ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ಹಾಗೂ ಶ್ರೀಶೈಲ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ಶುಕ್ರವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪೂರ್ಣ ಕುಂಭ ಮೆರವಣಿಗೆ ಹಾಗೂ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts