More

    ಲಂಚ ಪಡೆದು ಬಂಧನಕ್ಕೆ ಹೆದರಿ ನಾಲ್ಕನೇ ಮಹಡಿಯಿಂದ ಹಾರಿದ ಅಧಿಕಾರಿ; ಪ್ರಾಣವೇ ಹೋಯ್ತು

    ರಾಜ್​ಕೋಟ್​: ಲಕ್ಷಾಂತರ ರೂಪಾಯಿ ಲಂಚ ಪಡೆದು ಸಿಕ್ಕಿಬಿದ್ದ ಅಧಿಕಾರಿ ಬಳಿಕ ಬಂಧನಕ್ಕೆ ಹೆದರಿ ನಾಲ್ಕನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಗುಜರಾತ್​ನ ರಾಜ್​ಕೋಟ್​ನಲ್ಲಿನ ಡೈರೆಕ್ಟರ್ ಜನರಲ್ ಆಫ್ ಫಾರಿನ್ ಟ್ರೇಡ್​ (ಡಿಜಿಎಫ್​ಟಿ) ಕಚೇರಿಯಲ್ಲಿ ಈ ಪ್ರಕರಣ ನಡೆದಿದೆ.

    ಡಿಜಿಎಫ್​ಟಿ ಹಿರಿಯ ಅಧಿಕಾರಿ ಜಾವ್ರಿ ಮಾಲ್ ಬಿಷ್ಣೊಯ್​ (44) ಸಾವಿಗೀಡಾದ ಆರೋಪಿ. ರಫ್ತು ಉದ್ಯಮಿಯೊಬ್ಬರಿಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚ ಸ್ವೀಕರಿಸಿದ್ದ ಹಿನ್ನೆಲೆಯಲ್ಲಿ ಈ ಅಧಿಕಾರಿ ವಿರುದ್ಧ ದೂರು ದಾಖಲಾಗಿದ್ದು, ಸಿಬಿಐ ದಾಳಿ ನಡೆಸಿತ್ತು. ಈತ 9 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ಉದ್ಯಮಿ ದೂರು ನೀಡಿದ್ದರು. ಆ ಬಳಿಕ ಐದು ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ಈತನನ್ನು ಬಂಧನಕ್ಕೆ ಒಳಪಡಿಸಿದ್ದರು.

    ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ದಾಳಿ ಬಳಿಕ ರಾತ್ರಿಯಿಡೀ ಬಿಷ್ಣೊಯ್ ಕಚೇರಿ ಹಾಗೂ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಇಂದು ಬೆಳಗಿನ 9.45ರ ಸುಮಾರಿಗೆ ಸಿಬಿಐ ಅಧಿಕಾರಿಗಳು ಕಚೇರಿಯಲ್ಲಿ ಪರಿಶೀಲನೆಯಲ್ಲಿ ತೊಡಗಿದ್ದಾಗಲೇ ಇದ್ದಕ್ಕಿದ್ದಂತೆ ಕಿಟಿಕಿ ಬಳಿಗೆ ಓಡಿ ಹೊರಕ್ಕೆ ಹಾರಿದ್ದ. ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾಗಿ ವೈದ್ಯರು ಖಚಿತಪಡಿಸಿದ್ದಾಗಿ ಡಿಸಿಪಿ ಸುಧೀರ್ ದೇಸಾಯಿ ತಿಳಿಸಿದ್ದಾರೆ.

    ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts