More

    ಡಿಜಿಪಿ ಸಿ.ಎಚ್. ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ;ಪೊಲೀಸ್ ಇಲಾಖೆಯಲ್ಲಿ ಸಂಚಲನ

    ಬೆಂಗಳೂರು: ನಿವೃತ್ತಿಗೆ ಐದು ತಿಂಗಳು ಇರುವ ಮುನ್ನವೆ ಸರ್ಕಾರಿ ಸೇವೆಗೆ ರಾಜ್ಯ ಆಂತರಿಕ ಭದ್ರತಾ ವಿಭಾಗ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.

    ಜುಲೈನಲ್ಲಿ ಪ್ರತಾಪ್ ರೆಡ್ಡಿ ಸೇವೆಯಿಂದ ನಿವೃತ್ತಿ ಆಗಲಿದ್ದಾರೆ. ಅದಕ್ಕೂ ಮುನ್ನವೇ ಸ್ವಯಂನಿವೃತ್ತಿಗೆ ನಿರ್ಧರಿಸಿ ಸರ್ಕಾರಕ್ಕೆ ಪತ್ರ ಬರೆದಿರುವುದು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.ವೈಯಕ್ತಿಕ ಕಾರಣಕ್ಕೆ ಜ.22ರಂದು ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿದ್ದೇನೆ. ಬೇರೆ ಯಾವುದೇ ಕಾರಣ ಇಲ್ಲ ಎಂದು ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

    ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪ್ರತಾಪ್ ರೆಡ್ಡಿ, 1991ರ ಸಾಲಿನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಎಸ್‌ಪಿ, ಎಸ್‌ಪಿಯಾಗಿದ್ದರು. ಕೇಂದ್ರ ತನಿಖಾ ದಳದಲ್ಲಿ (ಸಿಬಿಐ) ಮೂರು ವರ್ಷ ಕೆಲಸ ಮಾಡಿದ್ದರು. ಪಶ್ಚಿಮ ವಲಯ ಐಜಿಪಿ, ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಮತ್ತು ಸಿಐಡಿಯ ಎಡಿಜಿಪಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.

    2013ರಲ್ಲಿ ಐಸಿಸ್ ಟ್ವಿಟರ್ ಹ್ಯಾಂಡ್ಲರ್ ಮೆಹಂದಿ ಬಿಸ್ವಾಸ್ ಬಂಧನ ಪ್ರಕರಣ, ಭೂಗತ ಪಾತಕಿ ಬನ್ನಂಜೆ ರಾಜನ ಬಂಧನ ಕಾರ್ಯಾಚರಣೆಯಲ್ಲಿ ಪ್ರತಾಪ್ ರೆಡ್ಡಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಐಎಸ್‌ಡಿಯಲ್ಲಿ ಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದು, ದಿಢೀರ್ ರಾಜೀನಾಮೆ ಸಲ್ಲಿಸಿರುವುದು ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts