ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ, ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತ ಸುಂದರ್ ರಾವ್, ತನಿಖಾ ಉಪನಿರ್ದೇಶಕ ಮಂಜುನಾಥ್ ಮತ್ತು ಕೇರಳದ ಪತ್ರಕರ್ತ ಸುರೇಂದ್ರನ್ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪ್ರಧಾನ ತಂತ್ರಿ ಕೊರಂಗ್ರಪಾಡಿ ಕೆ.ಪಿ.ಕುಮಾರಗುರು ತಂತ್ರಿ ಪ್ರಸಾದ ವಿತರಿಸಿ ಡಿಜಿಪಿಯನ್ನು ಗೌರವಿಸಿದರು. ದೇವಳದ ಕಾಮಗಾರಿ ಹಾಗೂ ಯೋಜನೆ ಕುರಿತು ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ ಮಾಹಿತಿ ನೀಡಿದರು.
ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಉಪಾಧ್ಯಕ್ಷ ಮಾಧವ ಆರ್.ಪಾಲನ್, ಮನೋಹರ ಎಸ್.ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ, ಬಾಲಾಜಿ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಸದಸ್ಯ ಜಗದೀಶ್ ಬಂಗೇರ, ಆರ್ಥಿಕ ಸಮಿತಿ ಮುಖ್ಯ ಸಂಚಾಲಕ ರತ್ನಾಕರ ಹೆಗ್ಡೆ, ರಮೇಶ್ ಶೆಟ್ಟಿ, ಕಚೇರಿ ನಿರ್ವಹಣಾ ಸಮಿತಿ ಪ್ರಧಾನ ಸಂಚಾಲಕ ಮಧುಕರ್ ಎಸ್, ಗ್ರಾಮ ಸಮಿತಿ ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ., ಪ್ರಚಾರ ಸಮಿತಿ ಮಹಿಳಾ ಮುಖ್ಯ ಸಂಚಾಲಕಿ ಸಾವಿತ್ರಿ ಗಣೇಶ್ ಉಪಸ್ಥಿತರಿದ್ದರು.