ಕೋಲ್ಕತ್ತಾ ಅತ್ಯಾಚಾರ: ಭಾರತದ ಪ್ರತಿಭಟನೆಗಳಿಗೆ ಡಾಕಾ ವಿವಿ ವಿದ್ಯಾರ್ಥಿಗಳ ಬೆಂಬಲ

dhaka
Published on

ಢಾಕಾ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೆಂಬಲವಾಗಿ ಬಾಂಗ್ಲಾದ ಢಾಕಾದಲ್ಲಿ ಅಲ್ಲಿನ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಶುಕ್ರವಾರ ಆವಾಜ್ ಟೋಲೋ ನಾರಿ(ಮಹಿಳೆಯರು ಧ್ವನಿ ಎತ್ತಿ) ಬ್ಯಾನರ್ ನಡಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಅತ್ಯಾಚಾರ ನಡೆಸಿದವರನ್ನು ಗಲ್ಲಿಗೇರಿಸಬೇಕು ಎಂಬಿತ್ಯಾದಿ ಸಂದೇಶಗಳಿದ್ದ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದರು. ಹಿಂಸಾಚಾರ, ಅತ್ಯಾಚಾರ ತಡೆಯಿರಿ ಎಂದು ಘೋಷಣೆಗಳನ್ನು ಕೂಗಿದರು.

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಯಿತು, ಇದು ಭಾರತದಾದ್ಯಂತ ಪ್ರತಿಭಟನೆಗಳಿಗೆ ಕಾರಣವಾಯಿತು.

ಬಾಂಗ್ಲಾದಲ್ಲಿ ಸಾಮೂಹಿಕ ದಂಗೆಯ ನಂತರ ಕೋಲ್ಕತ್ತಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಯುತ ತನಿಖೆ ಮತ್ತು ನ್ಯಾಯಕ್ಕಾಗಿ ಒತ್ತಾಯಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಢಾಕಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು ಗಮನ ಸೆಳೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net