ಮೂಲ್ಕಿ: ಮೂಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘದಲ್ಲಿ ದೀಪಾವಳಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಧನಲಕ್ಷ್ಮೀ ಪೂಜೆ, ಪ್ರಸಾದ ವಿತರಣೆ ನಡೆಯಿತು.
ಮೂಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಆಡಳಿತ ನಿರ್ದೇಶಕ ಶಿವರಾಮ್ ಶೆಟ್ಟಿ, ನಿರ್ದೇಶಕರಾದ ಗಂಗಾಧರ ಶೆಟ್ಟಿ ಬರ್ಕೆತೋಟ, ಅಶೋಕ್ ಕುಮಾರ್ ಚಿತ್ರಾಪು, ನರಸಿಂಹ ಪೂಜಾರಿ, ನಂಜುಂಡ ಆರ್.ಕೆ., ದೇವಪ್ರಸಾದ್ ಕೆಂಪುಗುಡ್ಡೆ, ಪುಷ್ಪಾ ಎಂ., ಪದ್ಮಿನಿ ವಿ.ಶೆಟ್ಟಿ, ರಾಜೇಶ್ ಶೆಟ್ಟಿ ಉಳೆಪಾಡಿ, ರಾಮ್ ನಾಯ್ಕ, ಮಾಜಿ ಪ್ರಬಂಧಕ ರಮೇಶ್ ಅಮೀನ್ ಕೊಕ್ಕರಕಲ್, ಪ್ರಬಂಧಕ ಚಂದ್ರಕಾಂತ ಶೆಟ್ಟಿ ಪಂಜಿನಡ್ಕ ಮತ್ತಿತರರು ಉಪಸ್ಥಿತರಿದ್ದರು.