ಸಸ್ಪೆನ್ಸ್​ ಥ್ರಿಲ್ಲರ್​ನಲ್ಲಿ ಧನ್ವೀರ್​ ; ರಘು ಕುಮಾರ್ ನಿರ್ದೇಶಿಸಲಿರುವ ನೂತನ ಚಿತ್ರ

WhatsApp-Image-2023-09-08-at-11.27.28-AM
Published on

ಬೆಂಗಳೂರು:

ಧನ್ವೀರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ‌‌‌. ಇದು ಧನ್ವೀರ್ ನಾಯಕರಾಗಿ ನಟಿಸುತ್ತಿರುವ ಐದನೇ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯುವ ನಿರ್ದೇಶಕ ರಘುಕುಮಾರ್ ನಿರ್ದೇಶಿಸಲಿದ್ದಾರೆ. ಇದು ರಘುಕುಮಾರ್ ನಿರ್ದೇಶನದ ಚೊಚ್ಚಲ ಚಿತ್ರ. ಈ ಚಿತ್ರ ‘ಸಮೃದ್ಧಿ ಫಿಲಂಸ್’ ಲಾಂಛನದಲ್ಲಿ ನಿರ್ಮಾಣವಾಗಲಿದೆ.

ಚಿತ್ರದಲ್ಲಿ ರಂಗಾಯಣ ರಘು, ರವಿಶಂಕರ್, ತಬಲನಾಣಿ, ಸಾಧುಕೋಕಿಲ ಇನ್ನಿತರ ಕಲಾವಿದರು ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣ ಶುರು ಮಾಡುವ ಆಲೋಚನೆ ಚಿತ್ರತಂಡದ್ದು. ನಿರ್ದೇಶಕ ರಘುಕುಮಾರ್ "ಕೋಟಿಗೊಬ್ಬ 3" ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ. ಮತ್ತು 'ದಿ ಬೆಲ್' ಎಂಬ ಕಿರುಚಿತ್ರ ನಿರ್ಮಿಸಿ ನಿರ್ದೇಶಿಸಿ, ಅನುಭವ ಪಡೆದಿದ್ದಾರೆ.

ಉಳಿದಂತೆ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕಾರ್ತಿಕ್ ಎಸ್, ಜುಡಾ ಸ್ಯಾಂಡಿ ಹಿನ್ನೆಲೆ ಸಂಗೀತ, ರಾಜನ್ ಶಬ್ದ ವಿನ್ಯಾಸ ಹಾಗೂ ಉಮೇಶ್ ಆರ್ ಬಿ ಸಂಕಲನವಿರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net