More

    ಧರ್ಮಸ್ಥಳ ಲಕ್ಷ ದೀಪೋತ್ಸವ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಲಕ್ಷದೀಪೋತ್ಸವ ಮಹೋತ್ಸವದ ಆರಂಭದ ದಿನವಾದ ಶನಿವಾರ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ ನಡೆಯಿತು.

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟನೆ ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದು ಆಶೀರ್ವದಿಸಿದರು.

    ಹೆಗ್ಗಡೆಯವರವ ಮೊಮ್ಮಗಳು ಮಾನ್ಯಾ, ಎಸ್‌ಡಿಎ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್ ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಆಡಳಿತ ನಿರ್ದೇಶಕ ಕೆ.ಎನ್ ಜನಾರ್ದನ್, ವಸ್ತು ಪ್ರದರ್ಶನ ಮಳಿಗೆ ಮೇಲುಸ್ತುವಾರಿ ಯತೀಶ್ ಬಳಂಜ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಎಸ್‌ಡಿಎಂ ಆಸ್ಪತ್ರೆ ಆಡಳಿತಾಧಿಕಾರಿ ಜನಾರ್ದನ್, ಜನಜಾಗೃತಿ ವೇದಿಕೆ ರಾಜ್ಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಿಸ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್, ರಾಮಕೃಷ್ಣ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ದೇವಿಪ್ರಸಾದ್ ಬೊಳ್ಮ, ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿ ಪ್ರಶಾಂತ್, ರತ್ನರಾಜ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts