More

    16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

    ಮದ್ದೂರು: ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ, ಕಾಲೇಜುಗಳಿಗೆ ಅನುದಾನ ಭಾಗ್ಯವನ್ನು ನೀಡುವಂತೆ ಸರ್ಕಾರದ ಗಮನ ಸೆಳೆಯಲು ಫೆ.16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ, ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ಅಧ್ಯಕ್ಷ ಜಿ.ಸಿ.ಶಿವಪ್ಪ ತಿಳಿಸಿದರು.

    ಸರ್ಕಾರ ಕನ್ನಡ ಶಾಲೆಗಳ ವಿಚಾರದಲ್ಲಿ ತಾರತಮ್ಯ ಮಾಡಬಾರದು. ಖಾಸಗಿ ಕನ್ನಡ ಮಾಧ್ಯಮ ಶಾಲಾ, ಕಾಲೇಜುಗಳು ಸರ್ಕಾರದ ಯಾವುದೇ ಅನುದಾನವಿಲ್ಲದೆ ಸಂಕಷ್ಟದಲ್ಲಿವೆ. ಕನ್ನಡ ಭಾಷೆ ಉಳಿಯುವುದು ಕನ್ನಡ ಶಾಲೆಗಳಿಂದ ಮಾತ್ರ ಸಾಧ್ಯ ಎಂಬುದನ್ನು ಸರ್ಕಾರ ಅರಿಯಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದಂತೆ 2012ಕ್ಕಿಂತ ಮೊದಲು ಪ್ರಾರಂಭಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳ ನಿರ್ವಹಣೆಯಲ್ಲಿರುವ ಪಿಯುಸಿವರೆಗಿನ ಶಿಕ್ಷಣ ಸಂಸ್ಥೆಗಳನ್ನು ಅನುದಾನದ ವ್ಯಾಪ್ತಿಗೆ ತರುವುದು ಹಾಗೂ ಇತರ ಸಾಮಾನ್ಯವರ್ಗದ ಶಾಲಾ ಕಾಲೇಜುಗಳನ್ನು ಅನುದಾನದ ವ್ಯಾಪ್ತಿಗೆ ತರಬೇಕು. ಕರ್ನಾಟಕದಲ್ಲಿ ಎಲ್ಲ ಭಾಗ್ಯಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರ, ನಮಗೆ ಅನುದಾನ ಭಾಗ್ಯ ನೀಡಬೇಕು. 28 ವರ್ಷಗಳ ಬೇಡಿಕೆಯಾದ 1995ರ ನಂತರ ಪ್ರಾರಂಭವಾದ ಅನುದಾನರಹಿತ ಕನ್ನಡ ಮಾಧ್ಯಮ ಶಾಲಾ, ಕಾಲೇಜುಗಳಿಗೆ ಅನುದಾನ ದೊರಕಿಸಿ ಕನ್ನಡ ಭಾಷೆಯ ಉಳಿವಿಗೆ ಒತ್ತು ನೀಡಬೇಕು. ಅಪಾಯದಲ್ಲಿರುವ ಕನ್ನಡ ಶಾಲಾ ಶಿಕ್ಷಕರು, ಬಡಮಕ್ಕಳ ಬದುಕಿಗೆ ಆಸರೆಯಾಗಬೇಕೆಂದು ಮನವಿ ಮಾಡಿದರು.

    ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ಮಾಡುತ್ತಿದ್ದು, ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts