More

    ಅಭಿವೃದ್ಧಿ ಕಾರ್ಯಗಳಲ್ಲಿ ಒಮ್ಮತ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಸದಸ್ಯರನ್ನು ಅಭಿನಂದಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಿವಿಮಾತು

    ಬೆಳ್ತಂಗಡಿ: ಪ್ರತಿಯೊಬ್ಬ ಚುನಾಯಿತ ಸದಸ್ಯರು ಅವರ ಕ್ಷೇತ್ರದ ಜನರ ಸಮಸ್ಯೆಗಳನ್ನು ತಿಳಿದುಕೊಂಡು ಪರಿಹರಿಸಲು ಪ್ರಯತ್ನಿಸಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯ ಮಾಡದೆ ಎಲ್ಲರೂ ಒಮ್ಮತದಿಂದ ನಡೆಯಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

    ಧರ್ಮಸ್ಥಳದಲ್ಲಿ ಭಾನುವಾರ ಧರ್ಮಸ್ಥಳ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರನ್ನು ಅಭಿನಂದಿಸಿ ಮಾತನಾಡಿದರು.
    ದೇವಸ್ಥಾನ ವತಿಯಿಂದ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ 5 ವರ್ಷದ ಅವಧಿಗೆ 25 ಲಕ್ಷ ರೂ. ನೆರವು ನೀಡುವುದಾಗಿ ಡಾ.ಹೆಗ್ಗಡೆಯವರು ಪ್ರಕಟಿಸಿದರು. ಸದಸ್ಯರು ಅವಶ್ಯಕತೆಗಳನ್ನು ಗಮನಿಸಿ, ನೆರವಿನ ಸದುಪಯೋಗ ಮಾಡಬೇಕು. ಒಳ್ಳೆಯ ಯೋಚನೆ ಹಾಗೂ ಯೋಜನೆಗಳೊಂದಿಗೆ ಧರ್ಮಸ್ಥಳವನ್ನು ಮಾದರಿ ಗ್ರಾಮವಾಗಿ ರೂಪಿಸಬೇಕು ಎಂದರು.

    ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯ ಮೋನಪ್ಪ ಗೌಡ ಮಾತನಾಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಮಾತನಾಡಿ, ಧರ್ಮಸ್ಥಳದಲ್ಲಿ ಪ್ರವಾಸಿ ಮಂದಿರ, ವೃದ್ಧಾಶ್ರಮ, ನಿವೇಶನ ರಹಿತರಿಗೆ ನಿವೇಶನ ವಿತರಣೆ, ಅಲೆಮಾರಿಗಳಿಗೆ ವಸತಿ ವ್ಯವಸ್ಥೆ ಬಗ್ಗೆ ಸೂಕ್ತ ಕಾರ್ಯಕ್ರಮ ರೂಪಿಸಲಾಗುವುದು. ಯಾತ್ರಿಕರು ಹಾಗೂ ಸ್ಥಳೀಯ ನಿವಾಸಿಗಳಿಗೆ ಸ್ವಚ್ಛತೆ ಕಾಪಾಡುವ ಬಗ್ಗೆ ಅರಿವು, ಜಾಗೃತಿ ಮೂಡಿಸಲಾಗುವುದು ಎಂದರು.

    ವಕೀಲ ರತ್ನವರ್ಮ ಬುಣ್ಣು, ಕೆ.ಮಹಾವೀರ ಅಜ್ರಿ, ಶುಭಶ್ಚಂದ್ರರಾಜ್, ಕೃಷಿ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ, ಉಪಸ್ಥಿತರಿದ್ದರು.
    ಜಮಾ ಉಗ್ರಾಣದ ಮುತ್ಸದ್ಧಿ ಬಿ.ಭುಜಬಲಿ ಸ್ವಾಗತಿಸಿ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ವಂದಿಸಿದರು. ಗ್ರಾಮ ಪಂಚಾಯಿತಿಯ ಎಲ್ಲ 25 ಮಂದಿ ಚುನಾಯಿತ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts