

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ ಖಂಡಿಸಿ ಹಾಗೂ ಧರ್ಮಸ್ಥಳದ ಪಾವಿತ್ರ್ಯ ಉಳಿಸುವ ಹಾಗೂ ಧರ್ಮಾಧಿಕಾರಿಗಳಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಕುಣಿಗಲ್ ತಾಲೂಕಿನ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಹಾಗೂ ಮಂಡ್ಯದ ಮಾಜಿ ಕಾಂಗ್ರೆಸ್ ಸಂಸದ ಎಲ್.ಆರ್.ಶಿವರಾಮೇಗೌಡ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಶನಿವಾರ ನಡೆಯಿತು.
ಕಾರ್ ರ‌್ಯಾಲಿಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದರು. ಕಾಂಗ್ರೆಸ್ ಶಾಸಕರು, ಪ್ರಮುಖ ಮುಖಂಡರು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಬೃಹತ್ ರ‌್ಯಾಲಿಯಲ್ಲಿ ಕ್ಷೇತ್ರಕ್ಕೆ ಆಗಮಿಸಿ ಧರ್ಮಸ್ಥಳದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
300ಕ್ಕೂ ಹೆಚ್ಚು ಕಾರುಗಳಲ್ಲಿ ಯಾತ್ರೆ: ಕುಣಿಗಲ್ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ 300ಕ್ಕೂ ಹೆಚ್ಚು ಕಾರುಗಳಲ್ಲಿ ಧರ್ಮಸ್ಥಳಕ್ಕೆ ಯಾತ್ರೆ ಮಾಡಿದ್ದಾರೆ.