More

    ಧರ್ಮಸ್ಥಳ ಸಂಸ್ಥೆಯಿಂದ ಗ್ರಾಮೀಣಾಭಿವೃದ್ಧಿ ಸಂಕಲ್ಪ

    ಚನ್ನರಾಯಪಟ್ಟಣ: ಜನರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಸಮಾಜಮುಖಿ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಪ್ರಶಂಸೆ ವ್ಯಕ್ತಪಡಿಸಿದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಪಟ್ಟಣದ ನವೋದಯ ವಿದ್ಯಾಸಂಸ್ಥೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಬೆಂಚ್ ಮತ್ತು ಡೆಸ್ಕ್‌ಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಹಳ್ಳಿಯಿಂದ ಪ್ರಾರಂಭವಾದ ಸಂಸ್ಥೆ ಪ್ರಸ್ತುತ ರಾಜ್ಯ ವ್ಯಾಪಿ ಪಸರಿಸಿದೆ. ಈ ಸಂಸ್ಥೆಯು ಕೃಷಿಕರು, ಮಹಿಳೆಯರು ಹಾಗೂ ಹಿಂದುಳಿದ ವರ್ಗದವರಿಗೆ ಆರ್ಥಿಕ ಸಹಾಯ ನೀಡುವುದರ ಜತೆಗೆ ಗ್ರಾಮೀಣಾಭಿವೃದ್ಧಿ ಸಂಕಲ್ಪ ತೊಟ್ಟಿದೆ ಎಂದರು.

    ಪ್ರಸ್ತುತ ಕೆರೆಗಳ ಹೂಳೆತ್ತಿಸಿ ಅವುಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಸರ್ಕಾರ ಆರಂಭಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆದರೆ, ಸಂಸ್ಥೆಯಿಂದ ಶುದ್ಧ ಗಂಗಾ ಯೋಜನೆಯಡಿ ನಿರ್ಮಿಸಿರುವ ಘಟಕಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ್ ನೆಲ್ಲಿತ್ತಾಯ, ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಂ.ಜಯರಾಂ, ಪರಿಸರ ಪ್ರೇಮಿ ಚ.ನಾ.ಅಶೋಕ್, ಜೆಡಿಎಸ್ ಮುಖಂಡ ಪರಮ ದೇವರಾಜೇಗೌಡ, ನವೋದಯ ವಿದ್ಯಾಸಂಸ್ಥೆ ಕಾರ್ಯದರ್ಶಿ ಸಿ.ಎನ್.ಬೋಜರಾಜು, ಪ್ರಾಂಶುಪಾಲ ಎಂ.ಎಸ್.ಕಾಂತರಾಜು, ಉಪ ಪ್ರಾಂಶುಪಾಲ ಸುರೇಶ್ ತೋಟಿ, ಜಯರಾಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts