

ವಿಜಯವಾಣಿ ಸುದ್ದಿಜಾಲ ಹೆಬ್ರಿ
ಸಾರ್ವಜನಿಕ ಗಣೇಶೋತ್ಸವದಿಂದ ಧಾರ್ಮಿಕ ಪ್ರಜ್ಞೆ ಜಾಗೃತವಾಗುತ್ತದೆ. ಊರಿನವರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ. ಇದೇ ರೀತಿ ಯುವಕರು ಕ್ರಿಯಾಶೀಲರಾಗಿ ಇರಬೇಕು ಎಂದು ಬೇಳಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಮಹೇಶ್ ಶೆಟ್ಟಿ ಬಾದ್ಲು ಹೇಳಿದರು.
ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 29ನೇ ಬೇಳಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೂಪದ ಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಜಯಂತಿ, ಲೈನ್‌ಮನ್‌ಗಳಾದ ಶ್ರೀನಾಥ್, ದಿನೇಶ್ ಅವರನ್ನು ಸನ್ಮಾನಿಸಲಾಯಿತು. ಭಾನುವಾರ ಜಲ ಸ್ತಂಭನ ಮಾಡಲಾಯಿತು. ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಬಿ.ಕರುಣಾಕರ ಶೆಟ್ಟಿ, ನಟ ಕವೀಶ್ ಶೆಟ್ಟಿ, ಉದ್ಯಮಿ ಕಿರಣ್ ತೋಳಾರ್, ಸಾಮಾಜಿಕ ಕಾರ್ಯಕರ್ತ ಪಾಂಡುರಂಗ ಪೂಜಾರಿ, ಪ್ರಧಾನ ಕಾರ್ಯದರ್ಶಿ ಈಶ್ವರ್ ಪೂಜಾರಿ, ಸಮಿತಿ ಸದಸ್ಯರು ಇದ್ದರು. ಶಬರೀಶ್ ಸ್ವಾಗತಿಸಿದರು. ರಮಿತ್‌ಕುಮಾರ್ ಶೆಟ್ಟಿ ನಿರೂಪಿಸಿದರು.