

ಧಾರವಾಡ: ಸಮಾಜದಲ್ಲಿ ಹಿಂದು-ಮುಸ್ಲಿಮರ ನಡುವೆ ಸಾಮರಸ್ಯ ಕಡಿಮೆಯಾಗುತ್ತಿದೆ ಎಂಬ ಆರೋಪಗಳು ನಿತ್ಯವೂ ಕೇಳಿ ಬರುತ್ತಿವೆ. ಇದಕ್ಕೆ ಪೂರಕವಾಗಿ ಸಾಕಷ್ಟು ನಿದರ್ಶನಗಳನ್ನು ಉದಾಹರಣೆಯಾಗಿ ಕೊಡುತ್ತಾರೆ. ಇದೆಲ್ಲದರ ನಡುವೆ ಸಾಮರಸ್ಯದ ಸಂದೇಶ ಸಾರುವ ಘಟನೆಯೊಂದಕ್ಕೆ ಧಾರವಾಡದ ಜನತೆ ಸಾಕ್ಷಿಯಾಗಿದ್ದಾರೆ.
ಧಾರವಾಡ ತಾಲೂಕಿನ ಮುಗದ ಗ್ರಾಮದ ಕಲ್ಮೇಶ್ವರ ದೇವರ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದ ಮಂದಿ ಆರೇಂಜ್ ಜ್ಯೂಸ್ ವಿತರಣೆ ಮಾಡಿದ್ದಾರೆ. ಈ ಮೂಲಕ ಮುಗದ ಗ್ರಾಮ ಹಿಂದು-ಮುಸ್ಲಿಮರ ಭಾವೈಕ್ಯತೆಗೆ ಸಾಕ್ಷಿಯಾಗಿದೆ.
ಬರೋಬ್ಬರಿ 40 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿರುವುದರಿಂದ ಸಹಜವಾಗಿಯೇ ಗ್ರಾಮದ ಜನರಲ್ಲಿ ಸಂತಸ ಮನೆ ಮಾಡಿದೆ. ಪ್ರತಿಯೊಬ್ಬರೂ ಕೂಡ ರಥೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಎ ಮುಸ್ಲಿಮರು ಆರೇಂಜ್ ಜ್ಯೂಸ್ ವಿತರಣೆ ಮಾಡಿ ಸಾಮರಸ್ಯದ ಸಂದೇಶ ಸಾರಿದ್ದಾರೆ.