More

    ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ; ಬರ ಪರಿಹಾರ ಕಾರ್ಯಗಳಿಗೆ 212 ಕೋಟಿ ರೂ ಪ್ರಸ್ತಾವ

    ಧಾರವಾಡ: ಜಿಲ್ಲೆಯಲ್ಲಿ ಬರಗಾಲವಿದ್ದರೂ ಜನ- ಜಾನುವಾರಗಳಿಗೆ ಅಗತ್ಯ ಕುಡಿಯುವ ನೀರು, ಮೇವು, ಉದ್ಯೋಗ ಸೇರಿ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ಬರ ಪರಿಹಾರ ಕಾರ್ಯ ಕೈಗೊಳ್ಳಲು ಸರ್ಕಾರಕ್ಕೆ 212 ಕೋಟಿ ರೂ. ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
    ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿದಿಂದ ಬುಧವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ರಾಷ್ಟ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.
    ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಜಿಲ್ಲೆಯ ಪ್ರಮುಖರಾದ ರಾ.ಹ. ದೇಶಪಾಂಡೆ, ಡೆಪ್ಯೂಟಿ ಚನ್ನಬಸಪ್ಪ, ಅದರಗುಂಚಿ ಶಂಕರಗೌಡ ಪಾಟೀಲರು ನಿರ್ಣಾಯಕ ಹೋರಾಟ ಮಾಡಿದ್ದಾರೆ. ಸುಮಾರು ೧೯ ಆಡಳಿತ ಭಾಗಗಳಲ್ಲಿ ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳು ೧೯೫೬ರಲ್ಲಿ ಪುನಃ ಒಂದಾಗಿ ಮೈಸೂರು ರಾಜ್ಯದಲ್ಲಿ ವಿಲೀನಗೊಂಡವು. ೫೦ ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ವರ್ಷ ಕರ್ನಾಟಕ ಸಂಭ್ರಮ- ೫೦: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ ಹಾಗೂ ನಾಡು- ನುಡಿಗೆ ಸಂಬ0ಽಸಿ ಯುವ ಜನತೆಯಲ್ಲಿ `ಕನ್ನಡ- ಕನ್ನಡಿಗ- ಕರ್ನಾಟಕ’ ಎಂಬ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
    ಆಯವ್ಯಯದಲ್ಲಿ ಮುಖ್ಯಮಂತ್ರಿಯವರು ಘೋಷಿಸಿರುವಂತೆ ನಾಡಿನ ಖ್ಯಾತ ಸಂಶೋಧಕÀ ಡಾ. ಎಂ.ಎ0. ಕಲಬುರಗಿ ಅವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಧಾರವಾಡದಲ್ಲಿ ಸ್ಥಾಪನೆ ಮತ್ತು ಕನ್ನಡ ಸಂಶೋಧನಾ ಕ್ಷೇತ್ರವನ್ನು ವಿಸ್ತರಿಸುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷಿ÷್ಮÃ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂಬರುವ ದಿನಗಳಲ್ಲಿ ಯುವನಿಽ ಯೋಜನೆ ಜಾರಿಗೊಳಿಸಲಾಗುವುದು ಎಂದರು.
    ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ರಾಜೀವ ಎಂ., ಉಪ ವಿಭಾಗಾಽಕಾರಿ ಶಾಲಂ ಹುಸೇನ್ ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳಿದ್ದರು.
    ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ವಿವಿಧ ದಳಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಕಾರ್ಯಕ್ರಮದ ನಂತರ ಸಚಿವರು ಆರೋಗ್ಯ ಇಲಾಖೆ ಯೋಜನೆಗಳ ಜಾಗೃತಿ ವಾಹನ ಮತ್ತು ಸಾರಿಗೆ ಸಂಸ್ಥೆಯ ಕನ್ನಡ ಜಾಗೃತಿ ರಥಕ್ಕೆ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts