18 C
Bangalore
Friday, December 6, 2019

ಇವಿಎಂ ಅನ್ನು ತಿರುಚಲು ಆಗದು, ಇದನ್ನು ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ ಎಂದು ಸಚಿವ ದೇಶಪಾಂಡೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಧಾರವಾಡ: ಇವಿಎಂ ಕುರಿತು ಕಾಂಗ್ರೆಸ್ ಮುಖಂಡರ ಸಂಶಯ ವಿಚಾರಕ್ಕೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯಿಸಿ ಇವಿಎಂ ಅನ್ನು ತಿರುಚುವುದಕ್ಕೆ ಬರುವುದಿಲ್ಲ. ಈ ವಿಚಾರದಲ್ಲಿ ನಾನು ಸಿದ್ದರಾಮಯ್ಯ ಜತೆ ಚರ್ಚಿಸಿ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದ್ದಾರೆ.

ಬೆಳಗ್ಗೆಯಷ್ಟೇ ಸಿದ್ದರಾಮಯ್ಯ ಅವರು ಇವಿಎಂ ಯಂತ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮಾತನಾಡಿ, ಇವಿಎಂ ಅನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ಏಕೆಂದರೆ ಎಲ್ಲ ಇವಿಎಂಗಳು ಜಿಲ್ಲಾಧಿಕಾರಿಯ, ಚುನಾವಣಾಧಿಕಾರಿ ಕಟ್ಟುನಿಟ್ಟಿನ ನಿಗಾದಲ್ಲಿ ಇರುತ್ತವೆ. ಇವಿಎಂ ಇದ್ದಾಗಲೇ ನಾವು ಕೂಡ ಚುನಾವಣೆ ಗೆದ್ದಿದೇವಲ್ಲ? ರಾಜ್ಯಸ್ಥಾನ, ಮಧ್ಯಪ್ರದೇಶ, ಛತ್ತಿಸಗಢದಲ್ಲಿ ನಾವೆಲ್ಲ ಚುನಾವಣೆ ಗೆದ್ದಿದ್ದೇವೆ. ಅದೆಲ್ಲವೂ ಇವಿಎಂನಲ್ಲೇ ಗೆದ್ದ ಚುನಾವಣೆಗಳು. ಆದರೆ, ಈಗ ಟ್ಯಾಂಪರಿಂಗ್ ಮಾಡಿದ್ದಾರೆ ಎನ್ನುವುದು ಸರಿಯಲ್ಲ ಎಂದು ಹೇಳಿದರು.

ಲೋಕಸಭೆ ಚುನಾವಣೆ ಮತ್ತು ಸ್ಥಳಿಯ ಸಂಸ್ಥೆ ಚುನಾವಣೆಯ ವಿಚಾರಗಳು ಭಿನ್ನವಾಗಿರುತ್ತವೆ. ರಾಷ್ಟ್ರ ಮಟ್ಟದಲ್ಲಿ ಮೋದಿಗೆ ಅಧಿಕಾರ ಕೊಡಬೇಕು ಎಂದು ಜನ ಬಯಸಿ ಅವರ ಕೈಗೆ ಅಧಿಕಾರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಮತದಾರರು ದೇವರು, ಅವರು ಏನು ಆದೇಶ ಕೊಡುತ್ತಾರೋ ಅದನ್ನು ನಾವು ಒಪ್ಪಿಕೊಳ್ಳಬೇಕು. ಅದೇ ಪ್ರಕಾರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಹೆಚ್ಚಿನ ಸೀಟ್ ಕೊಟ್ಟಿದ್ದಾರೆ. ಹೀಗಾಗಿ ನನ್ನ ಅಭಿಪ್ರಾಯದಲ್ಲಿ ಇವಿಎಂ ಮ್ಯಾನಿಪಿಲೇಟ್‌ ಮಾಡುವುದು ಬಹಳ ಕಷ್ಟ ಎಂದು ತಿಳಿಸಿದರು.

ಉತ್ತರ ಕರ್ನಾಟಕದಿಂದ ಸಿಎಂ ಗ್ರಾಮ ವಾಸ್ತವ್ಯ ಕುರಿತು ನನಗೇನೂ ಗೊತ್ತಿಲ್ಲ. ನನ್ನ ಕಡೆ ಏನನ್ನೂ ಅವರು ಮಾತನಾಡಿಲ್ಲ. ನನ್ನ ಜತೆ ಚರ್ಚೆಯನ್ನೂ ಮಾಡಿಲ್ಲ. ಅವರು ಗ್ರಾಮ ವ್ಯಾಸ್ತವ್ಯ ಮಾಡುತ್ತಿರುವುದು ಸ್ವಾಗತ. ಅದು ಸಿಎಂ ಆಗಿರುವ ಅವರ ಕಾರ್ಯಕ್ರಮ. ಅವರು ಎಲ್ಲಿ ಗ್ರಾಮ ವ್ಯಾಸ್ತವ್ಯ ಮಾಡುತ್ತಾರೆ ಎಂದು ನಮಗೆಲ್ಲಿ ಗೊತ್ತು? ನನ್ನ ಗ್ರಾಮ ವ್ಯಾಸ್ತವ್ಯ ಇದ್ದಿದ್ರೆ ನಾನು ಹೇಳುತ್ತಿದ್ದೆ ಎಂದರು.

18 ವರ್ಷದಲ್ಲಿ‌ 14 ವರ್ಷ ಬರಗಾಲ ಬಂದಿದೆ. ಮಧ್ಯೆ ನಾಲ್ಕು ವರ್ಷ ಬಿಟ್ಟರೇ ಉಳಿದೆಲ್ಲ ವರ್ಷ ಬರಗಾಲ ಇದೆ. ಇದರಿಂದ ಬಡವರು, ರೈತರು, ಕೂಲಿಕಾರರು‌ ತುಂಬಾ ತೊಂದರೆಯಲ್ಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮೋಡ ಬಿತ್ತನೆ ನಿರ್ಣಯ ಮಾಡಿದ್ದೇವೆ. ಒಂದು ವೇಳೆ ಮಳೆಯಾದರೆ ಮೋಡ ಬಿತ್ತನೆ ಮಾಡುವ ವಿಚಾರವೇ ಬರುವುದಿಲ್ಲ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...