More

    ಈದ್ಗಾ ಮೈದಾನದಲ್ಲಿ ಗಣೇಶೋತ್ಸವ; ಅಂಜುಮನ್​ ಅರ್ಜಿ ತಿರಸ್ಕರಿಸಿದ ಹೈಕೋರ್ಟ್: ಹೋರಾಟಕ್ಕೆ ಸಂದ ಜಯವೆಂದ ಅರವಿಂದ ಬೆಲ್ಲದ

    ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ನೀಡಬಾರದೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಧಾರವಾಡ ಹೈಕೋರ್ಟ್​​ ತಿರಸ್ಕರಿಸಿದೆ ಎಂದು ಬಿಜೆಪಿ ಶಾಸಕ ಅರವಿಂದ​ ಬೆಲ್ಲದ​ ತಿಳಿಸಿದ್ದಾರೆ.

    ಅಂಜುಮನ್​ ಸಂಸ್ಥೆ ಸಲ್ಲಿಸಿದ ಅರ್ಜಿ ಈ ಬಾರಿಯೂ ತಿರಸ್ಕೃತಗೊಂಡಿದ್ದು, ನ್ಯಾಯಾಲಯ ಈದ್ಗಾ ಮೈದಾನವನ್ನು ಪಾಲಿಕೆ ಆಸ್ತಿ ಎಂದು ಘೋಷಿಸಿದೆ. ಗಣೇಶೋಸತ್ಸವ ಸಂಬಂಧ ಪಾಲಿಕೆಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಆಯುಕ್ತರು ಈ ಕೂಡಲೇ ಅನುಮತಿ ನೀಡಬೇಕೆಂದು ಆಗ್ರಹಿಸಿದ್ದಾರೆ.

    ಕಳೆದ ವರ್ಷದಂತೆ ಈ ವರ್ಷವೂ ಸಹ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ನಡೆಸಲು ಅನುಮತಿ ಕೋರಿ ಪಾಲಿಕೆ ಆವರಣದಲ್ಲಿ ಬಿಜೆಪಿ ನಾಯಕರು, ಹಿಂದೂ ಪರ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

    Edgah protest

    ಇದನ್ನೂ ಓದಿ: VIDEO| ಚಾಲಕನ ನಿಯಂತ್ರಣ ತಪ್ಪಿ ಗೆದ್ದೆಗೆ ಉರುಳಿದ ಬಸ್​

    ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಅರವಿಂದ್​ ಬೆಲ್ಲದ್​ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ನೀಡಬಾರದೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಧಾರವಾಡ ಹೈಕೋರ್ಟ್​​ ತಿರಸ್ಕರಿಸಿದೆ. ನ್ಯಾಯಾಲಯ ಈದ್ಗಾ ಮೈದಾನವನ್ನು ಪಾಲಿಕೆ ಆಸ್ತಿ ಎಂದು ಘೋಷಿಸಿದೆ. ಗಣೇಶೋತ್ಸವ ಸಂಬಂಧ ಪಾಲಿಕೆಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಆಯುಕ್ತರು ಈ ಕೂಡಲೇ ಅನುಮತಿ ನೀಡಬೇಕೆಂದು ಶಾಸಕ ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ.

    ಇತ್ತ ಶಾಸಕ ಅರವಿಂದ್​ ಬೆಲ್ಲದ್​ ಅರ್ಜಿ ತಿರಸ್ಕಾರ ಆಗಿರುವ ಕುರಿತು ಘೋಷಣೆ ಮಾಡುತ್ತಿದ್ದಂತೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಸದಸ್ಯರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ, ಗಣೇಶ ಮೂರ್ತಿಯನ್ನು ಹೊತ್ತು ಸಂಭ್ರಮಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts