ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ ದಂಪತಿ; ಪತಿ ಸಾವು, ಪತ್ನಿ ಸ್ಥಿತಿ ಗಂಭೀರ

sucide
Published on

ಧಾರವಾಡ: ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವಿಗೀಡಾಗಿ ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದಲ್ಲಿ ನಡೆದಿದೆ.

ಮನಗುಂಡಿ ಗ್ರಾಮದ ವಿರೂಪಾಕ್ಷ ದೊಡವಾಡ (70) ಮೃತ ವ್ಯಕ್ತಿ. ಪತ್ನಿ ಬಸವ್ವ ದೊಡವಾಡ (60) ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ವರ್ಷಗಳ ಹಿಂದೆ ದಂಪತಿಯ ಪುತ್ರರು ನಿಧನರಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ಗ್ರಾಮದ ಹೊರವಲಯದ ಅರಣ್ಯದ ದಾರಿ ಪಕ್ಕ ವಿಷ ಸೇವಿಸಿದ್ದಾರೆ. ಈ ವೇಳೆ ಅಸ್ವಸ್ಥಗೊಂಡ ದಂಪತಿಯನ್ನ ಗಮನಿಸಿದ ದಾರಿಹೋಕರು ತಕ್ಷಣ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಪತಿ ವಿರೂಪಾಕ್ಷ ಸಾವನ್ನಪ್ಪಿದ್ದು, ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net