More

    ಪದವಿಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆ ಕಾಪಾಡಿ

    ಧಾರವಾಡ: ಗುಣಾತ್ಮಕ ಹಾಗೂ ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿಯಲ್ಲಿ ಕಾಪಾಡಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾ ಪದವಿಪೂರ್ವ ಕಾಲೇಜ್‌ಗಳ ಪ್ರಾಂಶುಪಾಲರು, ಉಪನ್ಯಾಸಕರ ಮತ್ತು ಬೋಧಕೇತರ ನೌಕರರ ಸಂಘಗಳ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಇತ್ತೀಚೆಗೆ ಮನವಿ ಪತ್ರ ಸಲ್ಲಿಸಿದರು.
    ಕೊಠಾರಿ ಆಯೋಗದ ಶಿಾರಸಿನಂತೆ ಶಿಕ್ಷಣದಲ್ಲಿ ಪ್ಲಸ್ 2 ಹಂತವನ್ನು ಅಳವಡಿಸುವ ಸಂಬಂಧ ಪಿ. ಮಲ್ಲಿಕಾರ್ಜುನಪ್ಪ ನೇತೃತ್ವದ ಸಮಿತಿಯು ನೀಡಿದ ವರದಿಯನ್ನಾಧರಿಸಿ 1971ರಲ್ಲಿ ಪದವಿಪೂರ್ವ ಶಿಕ್ಷಣ ಮಂಡಳಿ ಅಸ್ತಿತ್ವಕ್ಕೆ ಬಂತು. ದಿ. ಎಸ್. ಬಂಗಾರಪ್ಪ ಹಾಗೂ ವೀರಪ್ಪ ಮೊಯ್ಲಿ ಅವರ ದೂರದೃಷ್ಟಿಯ ಫಲವಾಗಿ 1992ರಲ್ಲಿ ಸ್ವತಂತ್ರ ಪದವಿಪೂರ್ವ ಶಿಕ್ಷಣ ಇಲಾಖೆ ರೂಪುಗೊಂಡಿದೆ. ಆದರೆ, ವಿಪರ್ಯಾಸ ಎಂದರೆ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿರುವ ಸಂದರ್ಭದಲ್ಲಿಯೇ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ನಿರ್ಲಕ್ಷಿಸುತ್ತಿರುವುದು ವಿಷಾದನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
    ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಪಿಯು ಹಂತವನ್ನು ಪದವಿ ಪೂರ್ವದಲ್ಲಿ ವಿಲೀನಗೊಳಿಸುವ ಯತ್ನ ನಡೆದಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಹಂತದ ಜವಾಬ್ದಾರಿಯನ್ನು ಜಿಪಂ ಸಿಇಒ ಅಡಿ ಹಾಗೂ ಮೇಲುಸ್ತುವಾರಿಯನ್ನು ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಿಗೆ ವಹಿಸಿ ಆದೇಶ ಹೊರಡಿಸಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾ ವಿಭಾಗವನ್ನು ಹಿಂತೆಗೆದು ಪುನಃ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿಯೇ ಉಳಿಸಬೇಕು ಎಂದು ತಿಳಿಸಿದ್ದಾರೆ.
    ಕಾಲೇಜ್‌ಗಳ ಸಂಖ್ಯೆ ಹೆಚ್ಚಿದ್ದು, ಡಿಡಿಪಿಯು ಕಚೇರಿಯ ಕಾರ್ಯಭಾರ ಹೆಚ್ಚಿದೆ. ಇದರಿಂದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡಿಡಿಪಿಯು ಕಚೇರಿಯ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಯಾವುದೇ ಶಿಕ್ಷಣ ತಜ್ಞರ ಜತೆ ಚರ್ಚಿಸದೇ ಏಕಾಏಕಿ ಪಿಯು ಹಂತದಲ್ಲಿ ಮೂರು ಪರೀಕ್ಷೆಗಳನ್ನು ನಡೆಸಲು ಆದೇಶಿಸಿರುವುದು ಅವೈಜ್ಞಾನಿಕ. ಅದನ್ನು ಕೈಬಿಡಬೇಕು. ಎಲ್ಲ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು. ಇಲ್ಲದಿದ್ದರೆ ಡಿ. 1ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
    ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಿ. ಹನುಮಂತಪ್ಪ, ಜಿ.ಬಿ. ತಹಶೀಲ್ದಾರ, ಸಂದೀಪ ಬೂದಿಹಾಳ, ಪ್ರಹ್ಲಾದ ಯಾವಗಲ್, ಬಸವರಾಜ ದೇವರಮನಿ, ಯು.ಎನ್. ಹಜೇರಿ, ಹೇಮಂತ ಹಂಚಿನಾಳ, ಸುರೇಶ ಮರಲಿಂಗಣ್ಣವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts