More

    ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸಿ,ಆಶಾ ಕಾರ್ಯಕರ್ತೆಯರಿಗೆ ರಕ್ಷಣೆ ಕೊಡಿ

    ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಖಂಡಿಸಿ ಸೂಕ್ತ ರಕ್ಷಣೆ ಕೋರಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಡಿಎಚ್​ಒ ಡಾ. ಎಸ್.ಎನ್.ಉಮೇಶ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

    ಕರೊನಾ ಸೋಂಕು ನಿಯಂತ್ರಣಕ್ಕೆ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸಂದರ್ಭ ರಾಜ್ಯಾದ್ಯಂತ ಎರಡು ತಿಂಗಳಿಂದ ಸೇವೆಯಲ್ಲಿರುವ ನಮ್ಮ ಮೇಲೆ ನಡೆಯುತ್ತಿರುವ ಹಲ್ಲೆಗಳು ಹೆಚ್ಚಾಗಿ ಆತಂಕ ಉಂಟಾಗಿದೆ. ಕೆಲಸದ ವೇಳೆ ಆಶಾ ಕಾರ್ಯಕರ್ತೆಯರು ಕೆಲ ಪುಂಡರ ಮತ್ತು ಪಾನಮತ್ತರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಹಾಗಾಗಿ ಶುಕ್ರವಾರ ಆಶಾ ಸಂರಕ್ಷಣಾ ದಿನವೆಂದು ಘೊಷಿಸಿ ರಾಜ್ಯವ್ಯಾಪಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

    ಲಾಕ್​ಡೌನ್ ಸಂಕಷ್ಟದಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ಗೌರವ ಧನದಿಂದ ಜೀವನ ನಡೆಸುವುದು ಕಷ್ಟವಾಗಿದೆ. ಹಗಲಿರುಳು ಇಲಾಖೆ ಜತೆ ಕೈಜೋಡಿಸಿರುವವರಿಗೆ ಮಾರ್ಚ್​ನಿಂದ ಕರೊನಾ ನಿಯಂತ್ರಣಕ್ಕೆ ಬರುವವರೆಗೆ ಮಾಸಿಕ 10 ಸಾವಿರ ರೂ. ನಿಗದಿಪಡಿಸಬೇಕು. ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಬೇಕು. ಕರೊನಾ ಸೋಂಕಿನಿಂದ ಮೃತಪಟ್ಟ ಆಶಾ ಕುಟುಂಬಕ್ಕೆ ನೀಡುವ 50 ಲಕ್ಷ ವಿಮೆ ಸೌಲಭ್ಯ ಒದಗಿಸಬೇಕು. ಸರ್ಕಾರ ವಿಶೇಷ ಪ್ಯಾಕೇಜ್ ಘೊಷಿಸಬೇಕು ಎಂದು ಒತ್ತಾಯಿಸಿದರು.

    ಜಿಲ್ಲಾಧ್ಯಕ್ಷೆ ತಾರಾಕೃಷ್ಣ, ತಾಲೂಕು ಅಧ್ಯಕ್ಷೆ ಗೀತಾ, ಸಾವಿತ್ರಿ, ಮಂಜುಳಾ, ಪ್ರೇಮಾ ಗಾಯತ್ರಿ, ನಿರೋಷಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts