More

    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯ

    ನವದೆಹಲಿ: ಭಾರತೀಯ ಕ್ರಿಕೆಟ್‌ನ ಶ್ರೇಷ್ಠ ನಾಯಕ ಎನಿಸಿದ್ದ ಮಹೇಂದ್ರ ಸಿಂಗ್​ ಧೋನಿ ಶನಿವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದರು.

    ಈ ಮೂಲಕ ಕಳೆದ ಒಂದು ತಿಂಗಳಿಂದ ಧೋನಿ ಭವಿಷ್ಯದ ಕುರಿತು ಹರಿದಾಡುತ್ತಿದ್ದ ಗಾಳಿ ಸುದ್ದಿಗಳಿಗೆ ಬ್ರೇಕ್ ಬಿದ್ದಂತಾಗಿದೆ. ನಾಯಕತ್ವದ ಮೂಲಕ ಇಡೀ ವಿಶ್ವ ಕ್ರಿಕೆಟ್ ಗಮನಸೆಳೆದಿದ್ದ ಎಂಎಸ್ ಧೋನಿ, ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿವೃತ್ತಿ ನಿರ್ಧಾರ ಪ್ರಕಟಿಸಿದರು.

    ಇದನ್ನೂ ಓದಿರಿ ಸುರೇಶ್ ರೈನಾ ಕೂಡ ವಿದಾಯ

    ‘ನಿಮ್ಮ ಪ್ರೀತಿ ಹಾಗೂ ಪ್ರೋತ್ಸಾಹಕ್ಕೆ ಧನ್ಯವಾದಗಳು, ನನ್ನನ್ನು ನಿವೃತ್ತಿ ಎಂದು ಪರಿಗಣಿಸಿ’ ಎಂದು ಧೋನಿ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯಐಪಿಎಲ್ ಸಿದ್ಧತೆಗಾಗಿ ಶುಕ್ರವಾರ ಚೆನ್ನೈಗೆ ಬಂದಿಳಿದ ಮರು ದಿನವೇ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದಾರೆ.

    2019ರ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯವೇ ಧೋನಿ ಅವರ ಕಡೇ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. 39 ವರ್ಷದ ಎಂಎಸ್ ಧೋನಿ 350 ಏಕದಿನ, 90 ಟೆಸ್ಟ್ ಹಾಗೂ 98 ಟಿ20 ಪಂದ್ಯಗಳನ್ನಾಡಿದ್ದರು. ಏಕದಿನ ಕ್ರಿಕೆಟ್‌ನಲ್ಲಿ 10 ಶತಕ ಸೇರಿದಂತೆ 10,773 ರನ್ ಪೇರಿಸಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ 6 ಶತಕ ಸೇರಿದಂತೆ 4876 ರನ್ ಗಳಿಸಿದ್ದರೆ, ಚುಟುಕು ಕ್ರಿಕೆಟ್‌ನಲ್ಲಿ 1617 ರನ್ ಬಾರಿಸಿದ್ದರು.

    ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts