25.1 C
Bangalore
Friday, December 6, 2019

ಸಭ್ಯಸ್ಥರ ಕ್ರೀಡೆಯನ್ನು ಕಲುಷಿತಗೊಳಿದ ಎಂ.ಎಸ್​. ಧೋನಿ ನಿನಗೆ ಇಂಥ ಅವಮಾನಕಾರಿ ಬೀಳ್ಕೊಡುಗೆ ಬೇಕಿತ್ತು…!

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್​ ಪಂದ್ಯ ಎಂದರೆ ಅಲ್ಲಿ ತುಂಬಾ ಜಿದ್ದಾಜಿದ್ದಿ ಹೋರಾಟ ಇರುತ್ತದೆ. ಯಾವುದೇ ಕ್ಷಣದಲ್ಲಿ ಅಸಮಾಧಾನ ಸ್ಫೋಟಗೊಂಡು, ಮಾತಿನ ವಾಗ್ಯುದ್ಧ ನಡೆಯುತ್ತದೋ ಎಂಬ ಪರಿಸ್ಥಿತಿ ಮೈದಾನದಲ್ಲಿರುತ್ತದೆ. ಈಗ ಈ ವೈರತ್ವ ಸಾಮಾಜಿಕ ಜಾಲತಾಣಗಳವರೆಗೂ ವಿಸ್ತರಿಸಿದೆ.

ಮೋಸದಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿಬಿದ್ದು ಸಭ್ಯಸ್ಥರ ಕ್ರೀಡೆಗೆ ಕಳಂಕ ತಂದ ಕುಖ್ಯಾತಿ ಪಾಕಿಸ್ತಾನದ ಆಟಗಾರರದ್ದಾಗಿದೆ. ಹೀಗಿದ್ದೂ ಸಭ್ಯಸ್ಥರ ಕ್ರೀಡೆಯನ್ನು ಕಲುಷಿತಗೊಳಿಸಿ, ಫಿಕ್ಸಿಂಗ್​ನಂಥ ಮೋಸದಾಟದ ಮೂಲಕ ಕಳಂಕ ತಂದಿದ್ದಾಗಿ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರ ಮೇಲೆ ಗೂಬೆ ಕೂರಿಸಲು ಪಾಕಿಸ್ತಾನ ಯತ್ನಿಸುತ್ತಿದೆ.

ಈ ಅರ್ಥದಲ್ಲಿ ಟ್ವೀಟ್​ ಮಾಡಿರುವ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅವರ ಪಾಕಿಸ್ತಾನ್​ ತೆಹ್ರೀಕ್​ ಎ ಇನ್ಸಾಫ್​ (ಪಿಟಿಐ) ಪಕ್ಷದ ಬಲೂಚಿಸ್ತಾನ ಶಾಖೆಯ ಮಾಜಿ ಮಾಹಿತಿ ಕಾರ್ಯದರ್ಶಿ ಸಲಾರ್​ ಸುಲ್ತಾನ್​ಝೈ, ಸಭ್ಯಸ್ಥರ ಕ್ರೀಡೆಯನ್ನು ಫಿಕ್ಸಿಂಗ್​ ಮತ್ತು ಪಕ್ಷಪಾತತನದಿಂದ ಕಲುಷಿತಗೊಳಿಸಿದ ಧೋನಿ ನಿನಗೆ ಇಂಥ ಅವಮಾನಕರ ಬೀಳ್ಕೊಡಗೆ ಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕ್​ನ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್​ ಚೌಧರಿ ಈ ಟ್ವೀಟ್​ ಅನ್ನು ರಿಟ್ವೀಟ್​ ಮಾಡಿದ್ಧಾರೆ.

ಕ್ರಿಕೆಟ್​ ವಿಶ್ವಕಪ್​ ಟೂರ್ನಿಯಲ್ಲಿ ಎಂ.ಎಸ್​. ಧೋನಿ ಹಾಗೂ ರವೀಂದ್ರ ಜಡೇಜಾ ಅವರ ಹೋರಾಟದ ಅರ್ಧಶತಕದ ಹೊರತಾಗಿಯೂ ವಿರಾಟ್​ ಕೊಹ್ಲಿ ಬಳಗ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್​ ವಿರುದ್ಧ 18 ರನ್​ಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಫವಾದ್​ ಚೌಧರಿ, ಪಾಕಿಸ್ತಾನಿಯರ ಹೊಸ ಪ್ರೇಮಿ ನ್ಯೂಜಿಲೆಂಡ್​ ಎಂದು ಟ್ವೀಟ್​ ಮಾಡಿ ಹರ್ಷ ವ್ಯಕ್ತಪಡಿಸಿದ್ದರು.

ಇದಕ್ಕೂ ಮುನ್ನ ಪಾಕಿಸ್ತಾನಕ್ಕೆ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಳ್ಳುವ ಅವಶ್ಯಕತೆ ಇತ್ತು. ಆದರೆ, ಇಂಗ್ಲೆಂಡ್​ ವಿರುದ್ಧದ ಲೀಗ್​ ಹಂತದ ಪಂದ್ಯದಲ್ಲಿ ಕೂಡ ಎಂ.ಎಸ್​. ಧೋನಿ ಅವರ ಹೋರಾಟದ ಹೊರತಾಗಿಯೂ ಭಾರತ ಸೋಲನುಭವಿಸಿದ್ದರಿಂದ, ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿತ್ತು. ಇದು ಪಾಕಿಸ್ತಾನಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಸಲಾರ್​ ಸುಲ್ತಾನ್​ಝೈ ಮತ್ತು ಫವಾದ್​ ಚೌಧರಿ ಅವರು ಧೋನಿ ವಿರುದ್ಧ ಟ್ವೀಟ್​ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದಾರೆ. (ಏಜೆನ್ಸೀಸ್​)

 

 

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...