More

    ಎಂ.ಎಸ್.ಧೋನಿ ಬಗ್ಗೆ ಅಪಪ್ರಚಾರ; ನಿವೃತ್ತ ಐಪಿಎಸ್​ ಅಧಿಕಾರಿಗೆ ಜೈಲುಶಿಕ್ಷೆ

    ಚೆನ್ನೈ: ಐಪಿಎಲ್ ಬೆಟ್ಟಿಂಗ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಮದ್ರಾಸ್​ ಹೈಕೋರ್ಟ್​ ನಿವೃತ್ತ ಐಪಿಎಸ್​ ಅಧಿಕಾರಿಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್.ಸುಂದರ್ ಮತ್ತು ಸುಂದರ್ ಮೋಹನ್ ಅವರಿದ್ದ ದ್ವಿಸದಸ್ಯ ಪೀಠವು ಸಂಪತ್​ ಅವರಿಗೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ.

    ಇದನ್ನೂ ಓದಿ: ‘ಡಂಕಿ’ ಬಿಡುಗಡೆಗೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ಶಾರುಖ್​; ಪುತ್ರಿ ಸುಹಾನಾ ಸಾಥ್​

    2013ರಲ್ಲಿ ನಡೆದಿದ್ದ ಐಪಿಎಲ್​ ಬೆಟ್ಟಿಂಗ್​ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದುರುದ್ಧೇಶಪೂರಿತ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಖಾಸಗಿ ಸುದ್ದಿ ಸಂಸ್ಥೆ, ಐಪಿಎಸ್​ ಅಧಿಕಾರಿ ಜಿ. ಸಂಪತ್ ಕುಮಾರ್​ ಮತ್ತು ಇತರರ ವಿರುದ್ಧ ಧೋನಿ ಮದ್ರಾಸ್​ ಹೈಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ನಂತರ, ಝೀ ಮೀಡಿಯಾಖಾಸಗಿ ಸುದ್ದಿ ಸಂಸ್ಥೆ, ನಿವೃತ್ತ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಮತ್ತು ಇತರರು, ಧೋನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು ಹೈಕೋರ್ಟ್ ತಡೆ ನೀಡಿತ್ತು. ನ್ಯಾಯಾಲಯದ ಆದೇಶದ ಹೊರತಾಗಿಯೂ ಸಂಪತ್​ಕುಮಾರ್​ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಧೋನಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ತೀರ್ಪು ನೀಡಿದ್ದು, ನಿವೃತ್ತ ಐಪಿಎಸ್ ಅಧಿಕಾರಿಗೆ 15 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts