More

    ನಟ ಧ್ರುವ ಸರ್ಜಾ ಈಗ ಮಾರ್ಟಿನ್

    ಬೆಂಗಳೂರು: ‘ಪೊಗರು’ ಸಿನಿಮಾ ಬಳಿಕ ಧ್ರುವ ಸರ್ಜಾ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಆ ಸಿನಿಮಾ ಮಾಡ್ತಾರೆ, ಈ ಸಿನಿಮಾದಲ್ಲಿ ನಟಿಸ್ತಾರೆ ಎಂಬ ಗುಲ್ಲು ಗಾಂಧಿನಗರದಲ್ಲಿ ಹರಿದಾಡಿತ್ತು. ಇದೀಗ ಅದೆಲ್ಲದಕ್ಕೂ ಉತ್ತರವೆಂಬಂತೆ ‘ಮಾರ್ಟಿನ್’ ಸಿನಿಮಾ ಘೋಷಣೆ ಆಗಿದೆ. ಸ್ವಾತಂತ್ರ್ಯ ದಿನದ ಪ್ರಯುಕ್ತ ಫಸ್ಟ್ ಲುಕ್ ಟೀಸರ್ ಸಹ ಬಿಡುಗಡೆ ಆಗಿದೆ. ಎ.ಪಿ ಅರ್ಜುನ್ ನಿರ್ದೇಶನದ ‘ಅದ್ದೂರಿ’ ಚಿತ್ರದ ಮೂಲಕ 2012ರಲ್ಲಿ ಸ್ಯಾಂಡಲ್​ವುಡ್​ಗೆ ಪದಾರ್ಪಣೆ ಮಾಡಿದ್ದ ಧ್ರುವ, ಇದೀಗ ಸುದೀರ್ಘ 9 ವರ್ಷದ ಬಳಿಕ ಮತ್ತೆ ಅರ್ಜುನ್ ಜತೆ ಕೈ ಜೋಡಿಸಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ಈ ಜೋಡಿಯ ಸಿನಿಮಾ ಸೆಟ್ಟೇರಬೇಕಿತ್ತು. ಇದೀಗ ಆ ಗಳಿಗೆ ಕೂಡಿಬಂದಿದ್ದು, ‘ಮಾರ್ಟಿನ್’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸದ್ದು ಮಾಡಲು ಹೊರಟಿದ್ದಾರೆ.

    ಉದಯ್ ಮೆಹ್ತಾ ನಿರ್ಮಾಣ ಮಾಡಲಿರುವ ‘ಮಾರ್ಟಿನ್’ ಚಿತ್ರ ಐದು ಭಾಷೆಗಳಲ್ಲಿ ಸಿದ್ಧವಾಗಲಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿಯೂ ತೆರೆಕಾಣಲಿದೆ. ಸತ್ಯ ಹೆಗಡೆ ಛಾಯಾಗ್ರಹಣ, ಮಣಿ ಶರ್ಮಾ ಸಂಗೀತ ಈ ಚಿತ್ರಕ್ಕಿದೆ. ಸದ್ಯ ಶೂಟಿಂಗ್ ಆರಂಭಿಸಿರುವ ತಂಡ, 2022ರಲ್ಲಿ ಸಿನಿಮಾ ತೆರೆಗೆ ತರುವ ನಿರೀಕ್ಷೆಯಲ್ಲಿದೆ. ಪಾತ್ರವರ್ಗದ ಆಯ್ಕೆಯೂ ನಡೆಯುತ್ತಿದ್ದು, ಶೀಘ್ರದಲ್ಲಿ ಚಿತ್ರಕ್ಕೆ ನಾಯಕಿ ಯಾರೆಂಬುದೂ ಗೊತ್ತಾಗಲಿದೆ.

    ಪ್ಲಾಸ್ಟಿಕ್​ ಕಪ್​, ಪ್ಲೇಟ್​, ಸ್ಟ್ರಾಗಳ ಉತ್ಪಾದನೆಯೇ ಬಂದ್​; ಸರ್ಕಾರದಿಂದ ಘೋಷಣೆ

    ಈತ ಡೇಟಿಂಗ್ ಕಿಂಗ್: ಇದುವರೆಗೆ 335 ಮಹಿಳೆಯರ ಜತೆ ಡೇಟ್ ಮಾಡಿರುವ ಇವನ ಟಾರ್ಗೆಟ್ ಎಷ್ಟು ಗೊತ್ತೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts