ತಮಿಳಿಗೆ ಧ್ರುವ ಸರ್ಜಾ ಅಭಿನಯದ ಪೊಗರು

Pogaru
Published on

ಬೆಂಗಳೂರು: ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಕನ್ನಡದ ಜತೆಗೆ ತೆಲುಗಿನಲ್ಲೂ ಬಿಡುಗಡೆ ಆಗಲಿದೆ ಎಂಬ ಸುದ್ದಿ ಕೆಲ ತಿಂಗಳ ಹಿಂದೆಯೇ ಅಧಿಕೃತವಾಗಿತ್ತು. ಇದೀಗ ಮತ್ತೊಂದು ವಿಚಾರವನ್ನು ಚಿತ್ರತಂಡ ಬಹಿರಂಗಪಡಿಸಿದೆ. ಅದೇನೆಂದರೆ, ತಮಿಳಿನಲ್ಲಿಯೂ ‘ಪೊಗರು’ ಸಿನಿಮಾ ತೆರೆಕಾಣಲಿದೆ. ಬಿ.ಕೆ. ಗಂಗಾಧರ್ ನಿರ್ಮಾಣ ಮಾಡಿರುವ ‘ಪೊಗರು’ ಚಿತ್ರವನ್ನು ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ.

ಎಲ್ಲ ಅಂದುಕೊಂಡಂತೆ ಆಗಿದ್ದರೆ, ಕಳೆದ ಏಪ್ರಿಲ್ ಅಥವಾ ಮೇ ತಿಂಗಳಲ್ಲಿಯೇ ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಕರೊನಾ ಹಿನ್ನೆಲೆಯಲ್ಲಿ ಅದು ಸಾಧ್ಯವಾಗಲಿಲ್ಲ. ಇದೀಗ ಕನ್ನಡ ಮತ್ತು ತೆಲುಗಿನ ಜತೆಗೆ ತಮಿಳಿನಲ್ಲಿಯೂ ಸಿನಿಮಾ ತೆರೆಕಾಣಲಿದೆ. ಹಾಗಾದರೆ ತಮಿಳಿನಲ್ಲಿ ಚಿತ್ರದ ಶೀರ್ಷಿಕೆ ಏನು? ತಮಿಳಿನಲ್ಲಿ ‘ಸೆಮ್ಮ ತಿಮಿರು’ ಶೀರ್ಷಿಕೆಯಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ಸದ್ಯ ಚಿತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಕೆಲಸಗಳನ್ನು ತಂಡ ಮುಗಿಸಿಕೊಂಡಿದೆ. ಜನವರಿ ಅಂತ್ಯಕ್ಕೆ ಸಿನಿಮಾ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net