ಬೆಂಗಳೂರು: ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ಬಿಡುಗಡೆಯ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು. ಈಗ ಸ್ವತಃ ಧ್ರುವ ಇದಕ್ಕೆಲ್ಲ ಫುಲ್ಸ್ಟಾಪ್ ಇಟ್ಟಿದ್ದಾರೆ. ಸೋಮವಾರ ಸಂಜೆ ಇನ್ಸ್ಟಾಗ್ರಾಂನಲ್ಲಿ ಲೈವ್ ಬಂದಿದ್ದ ಅವರು, ಫೆ. 19ರ ರಥಸಪ್ತಮಿ ಹಬ್ಬದಂದು ಚಿತ್ರ ಬಿಡುಗಡೆಯಾಗಲಿದೆ ಎಂದಿದ್ದಾರೆ.

‘ಈಗಾಗಲೇ ಕರೊನಾಗೆ ಔಷಧಿ ಬಂದಿದೆ. ಭಯಬಿಟ್ಟು ಚಿತ್ರಮಂದಿರಕ್ಕೆ ಬಂದು ಚಿತ್ರ ನೋಡಿ ಆಶೀರ್ವಾದ ಮಾಡಿ. ಈ ಹಿಂದೆ ನನ್ನ ಚಿತ್ರಗಳು ಬಿಡುಗಡೆಯಾದಾಗ ತುಂಬ ನಿರೀಕ್ಷೆಗಳನ್ನು ಇಟ್ಟುಕೊಂಡು ಬರಬೇಡಿ ಎಂದಿದ್ದೆ. ಆದರೆ, ಈ ಬಾರಿ ನಿರೀಕ್ಷೆ ಇಟ್ಟುಕೊಂಡೇ ಬನ್ನಿ. ಇದು ದುರಹಂಕಾರ ಅಥವಾ ಅತಿಯಾದ ವಿಶ್ವಾಸವಲ್ಲ. ನಿಜಕ್ಕೂ ಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ’ ಎನ್ನುತ್ತಾರೆ. ‘ಪೊಗರು’ ಚಿತ್ರವನ್ನು ನಂದಕಿಶೋರ್ ನಿರ್ದೇಶಿಸಿದ್ದಾರೆ. ರಶ್ಮಿಕಾ ಮಂದಣ್ಣ, ಧನಂಜಯ್, ರಾಘವೇಂದ್ರ ರಾಜಕುಮಾರ್ ಚಿತ್ರದಲ್ಲಿದ್ದಾರೆ.
ಮದ್ವೆಗೆ ಬರ್ದಿದ್ರೂ ಉಡುಗೊರೆ ಹಾಕಿ! ಲಗ್ನಪತ್ರಿಕೆಯಲ್ಲೇ ಗೂಗಲ್ ಪೇ, ಫೋನ್ ಪೇ ಕ್ಯೂಆರ್ ಕೋಡ್
ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಳು, ಇವತ್ತು ಬೆಳಗ್ಗೆ ಮನೆ ಪಕ್ಕದಲ್ಲೇ ಶವವಾಗಿದ್ದಳು!