More

  ಸಮಂತಾ ನಟಿಸಬೇಕಿದ್ದ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ?

  ಆಂಧ್ರಪ್ರದೇಶ: ಟಾಲಿವುಡ್​ ಅಂಗಳದಲ್ಲಿ ತಮ್ಮ ನಟನೆಯ ಮುಖೇನ ವಿಶೇಷ ಛಾಪು ಮೂಡಿಸಿರುವ ನಟಿ ಸಮಂತಾ ರುತ್​ ಪ್ರಭು ಮತ್ತು ರಶ್ಮಿಕಾ ಮಂದಣ್ಣ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದು, ಈ ಮಧ್ಯೆ ಇಬ್ಬರು ನಟಿಯರು ತಮ್ಮ ಮುಂಬರುವ ಚಿತ್ರಗಳ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದೀಗ ಸಮಂತಾ ನಾಯಕಿಯಾಗಿ ನಟಿಸಬೇಕಿದ್ದ ಚಿತ್ರದಲ್ಲಿ ರಶ್ಮಿಕಾ ನಟಿಸಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿದೆ.

  ಇದನ್ನೂ ಓದಿ: ಮಜ್ಜಿಗೆ ಕುಡಿಯುವುದರಿಂದ ದೇಹಕ್ಕೆ ಯಾವ ಯಾವ ರೀತಿಯಲ್ಲಿ ಲಾಭವಿದೆ? ಕೂಲ್ ಡ್ರಿಂಕ್ಸ್ ಬದಲು ಇದನ್ನು ಕುಡಿಯಿರಿ

  ರಾಹುಲ್ ರವೀಂದ್ರನ್ ನಿರ್ದೇಶನದಲ್ಲಿ ಮೂಡಿಬರಲು ಸಜ್ಜಾಗಿರುವ ಆ್ಯಕ್ಷನ್​ ಚಿತ್ರದಲ್ಲಿ ಸಮಂತಾ ಪಾತ್ರವನ್ನು ರಶ್ಮಿಕಾ ಮಂದಣ್ಣ ಮಾಡಲಿದ್ದಾರೆ ಎಂಬ ವದಂತಿಗಳು ಸದ್ಯ ಟಾಲಿವುಡ್​ನಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಆದ್ರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಘೋಷಣೆಯಾಗಿಲ್ಲ.

  ರಾಹುಲ್ ರವೀಂದ್ರನ್ ಆ್ಯಕ್ಷನ್​ ಕಟ್​ ಹೇಳುತ್ತಿರುವ ಈ ಚಿತ್ರವು ಮಹಿಳಾ ನಾಯಕಿಯನ್ನು ಹೈಲೈಟ್​ ಮಾಡುವ ಪ್ರಾಜೆಕ್ಟ್ ಎಂದು ಹೇಳಲಾಗಿದೆ. ಈ ಹಿಂದೆ ಸಿನಿಮಾಗೆ ಸಮಂತಾ ಅವರನ್ನು ನಾಯಕಿಯ ಪಾತ್ರಕ್ಕೆ ಆಯ್ಕೆ ಮಾಡಲಾಗಿತ್ತು. ಆದ್ರೆ, ಇದೀಗ ನಿರ್ದೇಶಕರು ತಮ್ಮ ನಿರ್ಧಾರದಲ್ಲಿ ಬದಲಾವಣೆ ತಂದಿದ್ದು, ರಶ್ಮಿಕಾ ಮಂದಣ್ಣ ಅವರನ್ನು ಆಯ್ಕೆ ಮಾಡಿದ್ದಾರೆ ಎಂಬ ವದಂತಿಗಳು ತಿಳಿಸಿವೆ, (ಏಜೆನ್ಸೀಸ್).

  ಮರಕ್ಕೆ ಡಿಕ್ಕಿ‌ ಹೊಡೆದ ಕಾರು ಇಬ್ಭಾಗ; ಸ್ಥಳದಲ್ಲೇ ಚಾಲಕ ಮೃತ್ಯು!

  ರಾಜ್ಯೋತ್ಸವ ರಸಪ್ರಶ್ನೆ - 23

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts