ಕಾನ್ಪುರ: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ಡೀಪ್ಫೇಕ್ ವಿಡಿಯೋ (Deepfake Video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಆಧುನಿಕ ತಂತ್ರಜ್ಞಾನ (technology) ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬರೀ ಸಿನಿಮಾ ಹಾಗೂ ಸೋಶಿಯಲ್ ಮೀಡಿಯಾ ಸೆಲೆಬ್ರಿಟಿಗಳಿಗೆ ಸೀಮಿತವಾಗಿದ್ದ ಡೀಪ್ಫೇಕ್ ತಂತ್ರಜ್ಞಾನವು ಇದೀಗ ಕ್ರೀಡಾ ಕ್ಷೇತ್ರಕ್ಕೆ ವಿಸ್ತರಿಸಿದ್ದು, ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ಕೋಚ್ ಗೌತಮ್ ಗಂಭೀರ್ಗೆ ಕಿಸ್ (KISS) ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಂಭೀರ್ಗೆ ವಿರಾಟ್ ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳು ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ನೆಟ್ಟಿಗರು ಕಮೆಂಟ್ ಮೂಲಕ ಕಿಡಿಕಾರಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ
ಇದನ್ನೂ ಓದಿ: ಗ್ರಾಮೀಣ ಭಾಗದ ಪತ್ರಕರ್ತರಿಗೆ ಸಿಹಿಸುದ್ದಿ; Government Orders To Issue Free Bus Pass
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ (Test Series) ಎರಡನೇ ಪಂದ್ಯ ಸೆಪ್ಟೆಂಬರ್ 27ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಟೀಮ್ ಇಂಡಿಯಾದ ಆಟಗಾರರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಅಭ್ಯಾಸದ ವೇಳೆ ಕೋಚ್ ಗೌತಮ್ರೊಂದಿಗೆ ವಿರಾಟ್ ಚರ್ಚಿಸುತ್ತಿದ್ದು, ಈ ವಿಡಿಯೋವನ್ನು ಯಾರೋ ಕಿಡಿಗೇಡಿಗಳು ತಿರುಚಿ ಇಬ್ಬರು ಕಿಸ್ ಮಾಡುತ್ತಿರುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಕಾನ್ಪುರದಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿದ್ದರು. ಅದರಂತೆ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಆಟದ ಬಗ್ಗೆ ಪರಸ್ಪರ ಮಾತುಕತೆಯಲ್ಲಿ ತೊಡಗಿದ್ದರು. ಈ ವೇಳೆ ಗಂಭೀರ್, ಕೊಹ್ಲಿಯ ಗಡ್ಡವನ್ನು ಮುಟ್ಟಿದ್ದರು. ಈ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈಗ ಈ ಫೋಟೋ ಬಳಸಿ ಈ ವಿಡಿಯೋ ಮಾಡಲಾಗಿದೆ. ಸದ್ಯ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹ ಕೇಳಿ ಬರುತ್ತಿದೆ.