More

    ಕಾಂಗ್ರೆಸ್‌ ಹಿರಿಯ ನಾಯಕ ಕಮಲನಾಥ್ ಬಿಜೆಪಿ ಸೇರ್ಪಡೆ ವದಂತಿಗಳಿಗೆ ತೆರೆ: ಅವರು ಹೇಳಿದ್ದಿಷ್ಟು?

    ಚಿಂದ್ವಾರ: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ನನ್ನ ಬಾಯಿಂದ ಕೇಳಿದ್ದೀರಾ? ಯವುದಾದರು ಸೂಚನೆ ಇದೆಯೇ ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

    ಮಂಗಳವಾರ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಕಮಲನಾಥ್ ಅವರು, ಜಿಲ್ಲೆಗೆ ಐದು ದಿನಗಳ ಭೇಟಿಗಾಗಿ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ವಿವಿಧ ವಿಧಾನಸಭೆಗಳಿಗೆ ತೆರಳಿ ಕಾರ್ಯಕರ್ತರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.

    ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಮಲನಾಥ್ ಅವರು, ಈ ಸರ್ಕಾರ ಕೇವಲ ಸಾಲದ ಮೇಲೆ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕರು, ಇದೀಗ ಚರ್ಚೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.

    ಕಮಲನಾಥ್​ ಅವರು ತಮ್ಮ ಮನೆಯ ಮೇಲೆ ಹಾರಾಡುತ್ತಿದ್ದ ಜೈ ಶ್ರೀ ರಾಮ್​ ಎಂದು ಬರೆಯಲಾಗಿದ್ದ ಧ್ವಜವನ್ನು ತೆರವುಗೊಳಿಸಿದ್ದಾರೆ. ಈ ಮೂಲಕ ಕಮಲ ಪಕ್ಷ ಸೇರ್ಪಡೆ ಸೇರುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಅವರು ಕಾಂಗ್ರೆಸ್​ನಲ್ಲೇ ಇರುತ್ತಾರೆ ಎಂಬ ಪಕ್ಷವು ಸ್ಪಷ್ಟಪಡಿಸಿದ ಮಾರನೇ ದಿನವೇ ಈ ಬೆಳವಣಿಗೆ ನಡೆದಿದೆ ಎಂದು ವರದಿಯಾಗಿದೆ.

    ಚಿಂದ್ವಾರದಿಂದ ನಕುಲ್​ ಸ್ಪರ್ಧೆ?: ಕಮಲನಾಥ್ ಅವರ ಪುತ್ರ ನಕುಲ್​ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳಿಗೆ ನಡುವೆಯೇ ಅವರ ಆಪ್ತ ಸಜ್ಜನ್​ ವರ್ಮಾ ಮಾತನಾಡಿ ಇದೆಲ್ಲ ಬಿಜೆಪಿ ಹಬ್ಬಿಸಿದ ಸುಳ್ಳು ಸುದ್ದಿ. ನಕುಲ್​ ಕಾಂಗ್ರೆಸ್​ನಿಂದ ಚಿಂದ್ವಾರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.

    ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸಿಪಿಐ ಅನ್ನಿ ರಾಜಾ ಕಣಕ್ಕೆ: ಅಭ್ಯರ್ಥಿಗಳನ್ನು ಘೋಷಿಸಿದ ಸಿಪಿಐ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts