

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರಚಾರ ಮಾಡಿರುವುದು ಖಂಡನೀಯ ಎಂದು AIMIM ಪಕ್ಷದ ಮುಖ್ಯಸ್ತ ಅಸಾದುದ್ದೀನ್ ಓವೈಸಿ ಹೇಳಿದ್ಧಾರೆ.
ಈ ಕುರಿತು ಮಾತನಾಡಿದ ಓವೈಸಿ RSS ಹಿನ್ನಲೆಯಿಂದ ಬಂದ ವ್ಯಕ್ತಿಯ ಪರ ಸೋನಿಯಾ ಗಾಂಧಿ ಅವರು ಪ್ರಚಾರ ಮಾಡಿರುವುದನ್ನು ಖಂಡಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಬಹಿರಂಗ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಓವೈಸಿ ಮೊದಲಿಗೆ ಕಾಂಗ್ರೆಸ್ ಪಕ್ಷ ಯಾವ ತರತ್ವ ಸಿದ್ದಾಂತದ ನಂಬಿಕೆ ಇಟ್ಟಿದೆ ಎಂಬುದನ್ನು ಖಚಿತಪಡಿಸಬೇಕು.
ಆರ್ಎಸ್ಎಸ್ ಹಿನ್ನೆಲೆಯಿಂದ ಬಂದ ಜಗದೀಶ್ ಶೆಟ್ಟರ್ ಪರ ಸೋನಿಯಾ ಗಾಂಧಿ ಪ್ರಚಾರ ಮಾಡುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಇದೇನಾ ನಿಮ್ಮು ಸೆಕ್ಯೂಲರ್ ತತ್ವ ನೀತಿಗಳು ಮೋದಿ ವಿರುದ್ಧ ಹೋರಾಡುವುದು ಹೀಗೆಯೇ ಎಂದು ಪ್ರಶ್ನಿಸಿದ್ದಾರೆ.
ಸೈದ್ಧಾಂತಿಕ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ವಿಫಲವಾಗಿರುವುದು ನಾಚಿಕೆಗೇಡಿನ ಸಂಗತಿ. ಅವರ ಪಕ್ಷದ ಗುಲಾಮರು ಹಾಗೂ ಜೋಕರ್ಗಳು ನನ್ನ ಮೇಲೆ ಆರೋಪ ಮಾಡುತ್ತಾರೆ.
ಕಾಂಗ್ರೆಸ್ ಬಿಜೆಪಿಯ ಬಿ ಟೀಂ ರೀತಿ ವರ್ತಿಸುತ್ತಿದೆ ಮತ್ತು ನಮ್ಮ ಪಕ್ಷದ ಮೇಲೆ ಅವರ ಸದಸ್ಯರು ಆರೋಪ ಮಾಡುತ್ತಿದ್ದಾರೆ ಎಂದು ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.