ಕಾರು ಡಿಕ್ಕಿ ಹೊಡೆದು ಮೃತ್ಯು

accident
Published on

ಕುಂದಾಪುರ: ಕಾರು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಸಮೀಪದ ವಡೇರಹೋಬಳಿ ಎಂಬಲ್ಲಿ ನಡೆದಿದೆ. ಚಂದ್ರ ಮೃತರು. ಕುಂದಾಪುರದ ವಡೇರ ಹೋಬಳಿ ಎಂಬಲ್ಲಿ ರಾ.ಹೆ.66ರಲ್ಲಿ ಬೈಂದೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಚಂದ್ರ ಎಂಬುವರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಅನುಸೂಯ ಮತ್ತು ರಮಾಮಣಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net