More

    ಚಟುವಟಿಕೆ ಇಲ್ಲದಿದ್ದರೆ ಮುಟ್ಟಿನ ಸಂದರ್ಭ ತೊಂದರೆ

    ಕೆ.ಆರ್.ನಗರ: ನಿತ್ಯ ದೈಹಿಕ ಚಟುವಟಿಕೆ ಇಲ್ಲದ ಬಹುತೇಕ ಮಹಿಳೆಯರು ಮುಟ್ಟಿನ ಸಮಯದಲ್ಲಿ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ.ಎಸ್.ವೈ.ಭವಾನಿ ಹೇಳಿದರು.

    ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ಕ್ರಾಸ್ ಘಟಕ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಮಹಿಳೆಯರಿಗೆ ಆರೋಗ್ಯ ಹಾಗೂ ಋತುಸ್ರಾವ ಕಪ್ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕಾಲೇಜು ವಿದ್ಯಾರ್ಥಿನಿಯರಿಗೆ ಪಾಠದೊಂದಿಗೆ ಆಟವೂ ಮುಖ್ಯ. ಕಾಲೇಜು ಆಡಳಿತ ಮಂಡಳಿ ನಿತ್ಯ ಒಂದು ಗಂಟೆ ದೈಹಿಕ ಚಟುವಟಿಕೆಗಳಲ್ಲಿ ತೊಡಗಲು ವಿದ್ಯಾರ್ಥಿನಿಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

    ಮಹಿಳೆಯರಲ್ಲಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಸಾಮಾನ್ಯವಾಗಿದೆ. ಕ್ಯಾನ್ಸರ್ ಬಂದ ನಂತರ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವುದಕ್ಕಿಂತ ಕ್ಯಾನ್ಸರ್ ಬಾರದಂತೆ ಎಚ್ಚರಿಕೆ ವಹಿಸಿ ತಡೆಯಬೇಕು ಎಂದು ಸಲಹೆ ನೀಡಿದರು.

    ಮುಟ್ಟಿನ ಶುಚಿತ್ವ ಕಾಪಾಡಿಕೊಳ್ಳದ ಮಹಿಳೆಯರಲ್ಲಿ ಕ್ಯಾನ್ಸರ್ ಕಾಣಿಸಿ ಕೊಳ್ಳಬಹುದಾಗಿದ್ದು, ಋತುಸ್ರಾವ ಕಪ್ ಲಭ್ಯವಿದ್ದು ಅದನ್ನು ಬಳಸಿ ಮುಟ್ಟಿನ ಶುಚಿತ್ವ ಕಾಪಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜ್, ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಾವಿಕಟ್ಟಿ ಮಾತನಾಡಿದರು. ಪ್ರಾಂಶುಪಾಲ ಪ್ರೊ.ಬಿ.ಟಿ.ವಿಜಯ್, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಸಿ.ಆರ್. ಕಿರಣ್ ಕುಮಾರ್, ರೆಡ್ ಕ್ರಾಸ್ ಘಟಕದ ಸಂಚಾಲಕ ಎಸ್.ಶಂಕರ್, ರೋಟರಿ ಕ್ಲಬ್ ವಲಯ ಸೇನಾನಿ ರಾಘವೇಂದ್ರ, ಸದಸ್ಯ ಸಿ.ವಿ.ಮೋಹನಕುಮಾರ್, ಅರುಣ, ವೈ.ಬಿ. ಶಶಿಭೂಷಣ್, ಟಿ.ಎನ್.ದಯಾನಂದ, ಎಂ.ಎನ್.ರವಿಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts