Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ವಿಶ್ವಶಾಂತಿ ಸಂದೇಶ ಸಾರಲು ಯೋಗ ದಿನಾಚರಣೆ

Thursday, 14.06.2018, 3:03 AM       No Comments

ಬೆಂಗಳೂರು: ಯೋಗದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಆಶಯ ಸಾಕಾರಗೊಳಿಸಲು ವಿಜಯವಾಣಿ ಹಾಗೂ ದಿಗ್ವಿಜಯ 24ಗಿ7 ನ್ಯೂಸ್ ಹಮ್ಮಿಕೊಂಡಿರುವ ವಿಶ್ವ ಯೋಗ ದಿನಾಚರಣೆಗೆ ನಿರೀಕ್ಷೆಗೂ ಮೀರಿ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಜೂ. 21ರಂದು ನಡೆಯಲಿರುವ ಯೋಗ ದಿನಾಚರಣೆಗೆ ದಿನಗಣನೆ ಆರಂಭ ವಾಗಿದೆ. ವಿವಿಧ ಸಂಘ-ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಜನಪ್ರತಿನಿಧಿಗಳು, ಸೆಲೆಬ್ರಿಟಿಗಳು ಹೀಗೆ ಎಲ್ಲ ಕಡೆಯಿಂದಲೂ ಉತ್ತಮ ಸ್ಪಂದನೆ ಸಿಗುತ್ತಿದೆ.

ಭರದ ಸಿದ್ದತೆ: ಕಳೆದ ವರ್ಷ ವಿಜಯವಾಣಿ ಆಯೋಜಿಸಿದ್ದ ಯೋಗ ದಿನಾಚರಣೆ ಯಂದು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಯೋಗಾಸಕ್ತರು ಕಾರ್ಯಕ್ರಮ ಯಶಸ್ವಿಗೊಳಿಸಿ ದ್ದರು. ವಿಧಾನಸೌಧದ ಎದುರು ಸಾವಿರಾರು ಮಂದಿ ಸಾಮೂಹಿಕವಾಗಿ ಯೋಗ ಪ್ರದರ್ಶನ ನೀಡುವ ಮೂಲಕ ಸಂಚಲನ ಹುಟ್ಟುಹಾಕಿದ್ದರು. ದೊಡ್ಡ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದ ಯೋಗ ದಿನ ಈ ಬಾರಿಯೂ ಯಶಸ್ವಿಯಾಗಲಿದೆ ಎಂಬ ಆಶಯದೊಂದಿಗೆ ಸಿದ್ಧತೆ ಚುರುಕುಕೊಂಡಿದೆ.

ಏಕಕಾಲಕ್ಕೆ ಆಯೋಜನೆ: ರಾಜಧಾನಿಯ ಎಲ್ಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಸಾಮೂಹಿಕ ಯೋಗ ಪ್ರದರ್ಶನ ನಡೆಸಲಾಗುತ್ತದೆ. ವಿವಿಧ ಸಂಘ- ಸಂಸ್ಥೆಗಳ ಸದಸ್ಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಐಟಿ-ಬಿಟಿ ಕಂಪನಿ ಗಳ ಉದ್ಯೋಗಿಗಳು ಸೇರಿ ಅಪಾರ ಸಂಖ್ಯೆಯಲ್ಲಿ ಯೋಗಾಸಕ್ತರು ಪಾಲ್ಗೊಳ್ಳಲಿದ್ದಾರೆ.

ಯೋಗ ದಿನಾಚರಣೆ ವಿಶ್ವದೆಲ್ಲೆಡೆ ದೊಡ್ಡ ಸದ್ದು ಮಾಡುತ್ತಿದೆ. ಭಾರತೀಯರಾದ ನಾವು ಯೋಗಾಭ್ಯಾಸವನ್ನು ಜೀವನದ ಅವಿಭಾಜ್ಯ ಅಂಗವಾಗಿ ರೂಢಿಸಿಕೊಳ್ಳಬೇಕು. ಸ್ವಸ್ಥ ರಾಷ್ಟ್ರ ನಿರ್ವಣದಲ್ಲಿ ಯೋಗಕ್ಕೆ ವಿಶೇಷ ಸ್ಥಾನಮಾನವಿದೆ ಎಂಬುದನ್ನು ಭಾರತೀಯರು ಮರೆಯಬಾರದು.

| ರವಿಶಂಕರ್ ಯೋಗ ಗುರು

 

ಯೋಗ ಮಾಡುವುದರಿಂದ ಋಣಾತ್ಮಕ ಚಿಂತನೆಗಳು ದೂರವಾಗುತ್ತವೆ, ಉತ್ಸಾಹ ಮೂಡುತ್ತದೆ. ಸದಾ ಕಾಲ ಉತ್ಸಾಹದ ಚಿಲುಮೆಯಂತೆ ದಿನನಿತ್ಯದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುತ್ತದೆ. ಇದೇ ಯೋಗದ ನಿಜವಾದ ತಾಕತ್ತು.

| ಕೇಶವಮೂರ್ತಿ ಯೋಗಾಸಕ್ತ

Leave a Reply

Your email address will not be published. Required fields are marked *

Back To Top