More

    ಆಧುನಿಕ ಯುಗದಲ್ಲಿ ಡಿಜಿಟಲೀಕರಣ ಅವಶ್ಯಕ

    ನಾಪೋಕ್ಲು: ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಅನನ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

    ಸಮೀಪದ ಕಕ್ಕಬೆ ಕುಂಜಿಲ ಗ್ರಾಮದ (ಕುಂಜಿಲ ಪರಂಬು) ಕೆಪಿ ಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು. ಜಗತ್ತು ಕ್ಷಿಪ್ರಗತಿಯಲ್ಲಿ ಬದಲಾವಣೆ ಆಗುತ್ತಿದ್ದು, ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲೀಕರಣ ಅವಶ್ಯಕ ಎಂದರು.
    ನಗರ ಪ್ರದೇಶಗಳಲ್ಲಿ ತಾಂತ್ರಿಕತೆ ಮುಂದುವರಿದಿದ್ದು ವಿದ್ಯಾರ್ಥಿಗಳು ಬದಲಾದ ಆಧುನಿಕತೆಗೆ ಹೊಂದಿಕೊಳ್ಳುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಡಿಜಿಟಲ್ ಜಗತ್ತಿನಲ್ಲಿ ಸಾಧಕಗಳನ್ನು ಮಾತ್ರ ಆಯ್ಕೆ ಮಾಡಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕಾಗಿದೆ ಎಂದರು.

    ಸಾಮಾಜಿಕ ಜಾಲತಾಣಗಳ ದುರುಪಯೋಗವಾಗುತ್ತಿದೆ. ಅದರಲ್ಲಿ ಬಹುಬೇಗನೆ ಬಿತ್ತರವಾಗುವ ತಪ್ಪು ಮಾಹಿತಿಗಳಿಂದ ದೂರವಿದ್ದು ಉತ್ತಮವಾದದನ್ನು ಮಾತ್ರ ಆಯ್ಕೆ ಮಾಡಿ ಉಪಯೋಗ ಪಡೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಮುಂದಿನ ಭವಿಷ್ಯ ರೂಪಿಸಿಕೊಳ್ಳಬೇಕಿದೆ. ಅಲ್ಲದೆ ಶಾಲಾ ಮಕ್ಕಳಿಗೆ ಡಿಜಿಟಲೀಕರಣಕ್ಕೆ ಒತ್ತು ನೀಡಿರುವುದು ಶ್ಲಾಘನೀಯ ಎಂದರು.

    ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ ಅವರನ್ನು ಸನ್ಮಾನಿಸಲಾಯಿತು. ಕಕ್ಕಬೆ ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿಲ್ಪಾ ಲೋಕೇಶ್, ಉಪಾಧ್ಯಕ್ಷೆ ಕಲಿಯಂಡ ಬೀನಾ ನವೀನ್, ಸದಸ್ಯರಾದ ಬಶೀರ್ ಪೊಯಕ್ಕರೆ ,ಕುಂಡಡ ರಜಾಕ್, ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷೆ ಸಫಿಯಾ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ , ಮಾಜಿ ಅಧ್ಯಕ್ಷ ಕರ್ತಂಡ ಶೈಲ ಕುಟ್ಟಪ್ಪ ,ಮಾಜಿ ಸದಸ್ಯ ಬಾಚಮಂಡ ಲವ ಚಿನ್ನಪ್ಪ , ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ, ಕುಡಿಯರ ಮುತ್ತಪ್ಪ , ಕೈಬುಳಿರ ರಾಮಯ್ಯ ಮಾಸ್ಟರ್, ಪಕ್ರು ಮಾಸ್ಟರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts