More

    ಸಂಕಷ್ಟದಲ್ಲಿ ಮೈಶುಗರ್ ಕಾರ್ಖಾನೆ; ಶೀಘ್ರ ಆರ್ಥಿಕ ಪರಿಹಾರಕ್ಕೆ ದಿನೇಶ್ ಗೂಳಿಗೌಡ ಆಗ್ರಹ

    ಬೆಂಗಳೂರು: ಆರ್ಥಿಕ ನಷ್ಟದಿಂದಾಗಿ ಸ್ಥಗತಿವಾಗಿರುವ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಮತ್ತೆ ರಾಜ್ಯ ಸರ್ಕಾರ ಪುನಶ್ಚೇತನಗೊಳಿಸಿ 30 ಕೋಟಿ ರೂ. ಬಿಡುಗಡೆ ಮಾಡಿದೆ. ರೈತರ ಹಿತದೃಷ್ಟಿಯಿಂದ ಕೂಡಲೇ ಬಾಕಿಯಿರುವ ಹಣವನ್ನು ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದಾರೆ.

    ಸರ್ಕಾರ ಈಗಾಗಲೇ 30 ಕೋಟಿ ರೂ. ಬಿಡುಗಡೆ ಮಾಡಿದೆ. ಬಾಕಿಯಿರುವ 20 ಕೋಟಿ ರೂ. ಬಿಡುಗಡೆ ಮಾಡುವುದರಿಂದ ರೈತರ ಆತಂಕ ದೂರಮಾಡಬಹುದಾಗಿದೆ. ರೈತರ ಕಾಳಜಿಯ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಥಳೀಯ ಜನಪ್ರತಿನಿಧಿಗಳ ಸಭೆ ಕರೆಯಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

    ಮುಖ್ಯಮಂತ್ರಿಗೆ ಬರೆದ ಪತ್ರದಲ್ಲೇನಿದೆ?

    ಮಂಡ್ಯದಲ್ಲಿರುವ ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಹಾಗೂ ಕಾರ್ಖಾನೆಯ ಪ್ರಾರಂಭಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತರ ಒತ್ತಾಯದ ವಿಚಾರವಾಗಿ, ರಾಜ್ಯ ಸರ್ಕಾರವು 50 ಕೋಟಿ ರೂ. ಘೋಷಿಸಿದೆ. ಸದ್ಯ ರಾಜ್ಯ ಸರ್ಕಾರವು 30 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಉಳಿದ 20 ಕೋಟಿ ರೂ. ಹಣ ಇನ್ನೂ ಬಿಡುಗಡೆಯಾಗಿಲ್ಲ.

    2022ರ ಸೆಪ್ಟೆಂಬರ್ 1ರಿಂದ ಮೈಸೂರು ಸಕ್ಕರೆ ಕಾರ್ಖಾನೆಯು ಕಾರ್ಯಾರಂಭ ಮಾಡಿದ್ದು, ಪ್ರತಿದಿನ 300-400 ಟನ್‌ ಕಬ್ಬು ಅರೆಯುವಿಕೆಯಿಂದ ಪ್ರಾರಂಭವಾಗಿ ಪ್ರಸ್ತುತ ಸುಮಾರು 1500-1600 ಟನ್ ಕಬ್ಬನ್ನು ಅರೆಯಲಾಗುತ್ತಿದೆ. ಕಾರ್ಖಾನೆಗೆ ರೈತರು ಸುಮಾರು 3 ಲಕ್ಷ ಟನ್ ಕಬ್ಬನ್ನು ಸರಬರಾಜು ಮಾಡಲು ತಯಾರಿದ್ದಾರೆ. ಆದರೆ ಕಾರ್ಖಾನೆಯ ಆರ್ಥಿಕ ಪರಿಸ್ಥಿತಿ ಮತ್ತು ಕಬ್ಬು ಅರೆಯುವಿಕೆಯ ನಿಧಾನಗತಿಯಿಂದಾಗಿ ರೈತರು ಬೇರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡುತ್ತಿದ್ದಾರೆ.

    ಆದರೂ ಸೆ. 1 ರಿಂದ ಸುಮಾರು 36,000 ಟನ್‌ ಕಬ್ಬು ಅರೆಯಲಾಗುತ್ತಿದೆ. ಆದರೆ ನಿಗದಿತ ಗುರಿಗೆ ತಕ್ಕಂತೆ ಪ್ರತಿ ದಿನ ಸುಮಾರು 3,000 ಟನ್‌ ಕಬ್ಬನ್ನು ಅರೆಯಬೇಕಾಗಿದೆ.

    ಈ ಹಿಂದೆಯೇ ಹಣಕಾಸು ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಉಳಿದ 20 ಕೋಟಿ ರೂ. ಹಣ ಬಿಡುಗಡೆ ಮಾಡಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಆದೇಶ ನೀಡಿದ್ದರೂ ಸಹ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು ಮತ್ತು ಕಬ್ಬು ಸರಬರಾಜು ಮಾಡಿದ ರೈತಲಿಗೆ ಹಾಗೂ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು/ಕಾರ್ಮಿಕರುಗಳಿಗೆ ವೇತನ ನೀಡಲು ತೊಂದರೆಯಾಗುತ್ತಿದೆ.

    ಹೀಗಾಗಿ ಮೈಸೂರು ಸಕ್ಕರೆ ಕಾರ್ಖಾನೆಗೆ ಬಿಡುಗಡೆ ಮಾಡಬೇಕಾಗಿರುವ 20 ಕೋಟಿ ರೂ. ಹಣವನ್ನು ಶ್ರೀಘ್ರದಲ್ಲಿ ಬಿಡುಗಡೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದಾರೆ.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts