ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್​ ಪಿತೂರಿ: ದಿನೇಶ್​ ಗುಂಡೂರಾವ್​

Dinesh Gundu Rao
Published on

ತುಮಕೂರು: ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್​ನವರು ಒಟ್ಟಾಗಿ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ದಿನೇಶ್​ ಗುಂಡೂರಾವ್​ ಸಿಂಗಾಪುರದಲ್ಲಿ ಕುಳಿತುಕೊಂಡು ಆಪರೇಷನ್​ ಮಾಡುತ್ತಿರುವುದು ಡಿಸಿಎಂ ಡಿ.ಕೆ. ಶಿವಕುಮಾರ್​ ಅವರಿಗೆ ತಿಳಿದಿದೆ. ಈ ವಿಚಾರವನ್ನು ಅವರೇ ನಿಭಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದವರು ನಮ್ಮ ವಿರುದ್ಧ ಯಾವುದೇ ತರಹದ ಷಡ್ಯಂತ್ರ ರೂಪಸಿದ್ದರು ಯಾವುದೇ ತರಹ ಪ್ರಯೋಜನವಾಗುವುದಿಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. ಐದು ವರ್ಷ ಆಡಳಿತ ನಡೆಸುತ್ತೇವೆ. ನಮ್ಮ ಸರ್ಕಾರಕ್ಕೆ ಯಾವುದೇ ಆತಂಕ ಕಾಡುತ್ತಿಲ್ಲ ಎಂದಿದ್ದಾರೆ.

Dinesh GunduRao

ಸಚಿವರ ಕಾರ್ಯವೈಖರಿಗೆ ಅಸಮಾಧಾನಗೊಂಡು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿ ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ನಮ್ಮಲ್ಲಿ ಅಸಮಾಧಾನವಿಲ್ಲ ಎಲ್ಲರು ಒಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೋವಿಡ್​ ಸಮಯದಲ್ಲಿ ಹಾಗೂ ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಎಲ್ಲಾ ಅಕ್ರಮಗಳನ್ನು ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯೇ ಕಂಡು ಗುರುತಿಸಿದೆ. ನಡೆದಿರುವ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ್ದರೆ ದ್ವೇಷ ರಾಜಕಾರಣ ಹೇಗಾಗುತ್ತದೆ ಎಂದು ಸಚಿವ ದಿನೇಶ್​ ಗುಂಡೂರಾವ್​ ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net