More

    ಹನುಮಾನ್​ ಚಾಲೀಸಾ ಪ್ರಕರಣ; ಯಾವ ಪುರುಷಾರ್ಥಕ್ಕಾಗಿ ಪ್ರತಿಭಟನೆ ಎಂದ ದಿನೇಶ್​ ಗುಂಡೂರಾವ್

    ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವಿನ ರಾಜಕೀಯ ಸಮರಕ್ಕೆ ಕಾರಣವಾಗಿದ್ದು, ಉಭಯ ಪಕ್ಷಗಳ ನಾಯಕರು ಆರೋಪ-ಪ್ರತ್ಯರೋಪಗಳಲ್ಲಿ ನಿರತರಾಗಿದ್ದಾರೆ.

    ಇತ್ತ ಮೊಬೈಲ್​ ಅಂಗಡಿ ಮಾಲೀಕ ಮುಖೇಶ್​ ಮೇಲೆ ಹಲ್ಲೆ ಖಂಡಿಸಿ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಶೋಭಾ ಕರಂದ್ಲಾಜೆ ಘಟನೆ ನಡೆದ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಸಂಸದರನ್ನು ವಶಕ್ಕೆ ಪಡೆದಿದ್ದಾರೆ. ಇತ್ತ ಬಿಜೆಪಿ ನಾಯಕರ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ಪ್ರತಿಭಟನೆ ಯಾವ ಪುರುಷಾರ್ಥಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸಂತೋಷದ ವಿಷಯ. ಆದರೆ ಈ ಪ್ರತಿಭಟನೆ ಯಾವ ಪುರುಷಾರ್ಥಕ್ಕಾಗಿ. ಸಮಾಜದ ಶಾಂತಿ ಭಂಗ ಉಂಟುಮಾಡುವವರ ವಿರುದ್ಧ ನಮ್ಮ ಸರ್ಕಾರ ತೀಕ್ಷ್ಣ ಕ್ರಮ ಕೈಗೊಳ್ಳಲಿದೆ. ಆದರೆ ಇಂತಹ ಘಟನೆಗಳು ನಡೆದಾಗ ಇವರಲ್ಲಿ ಹುಟ್ಟುವ ಈ ಆಕ್ರೋಶ, ಪ್ರತಿಭಟನೆ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾದಾಗ ಎಲ್ಲಿಹೋಗಿತ್ತು? ನಮ್ಮ ಜನರು ಬರದಿಂದ ತತ್ತರಿಸಿ ಕೇಂದ್ರದ ನೆರವಿಗೆ ಮೊರೆ ಇಟ್ಟಾಗ ಇವರಿಗೆ ಯಾಕೆ ಈ ಆಕ್ರೋಶ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಇದನ್ನೂ ಓದಿ: ಮುಂಬೈ ಇಂಡಿಯನ್ಸ್​ನಲ್ಲಿ ನಿಲ್ಲದ ಕಿತ್ತಾಟ; ಇದರ ಬೆನ್ನಲ್ಲೇ ಸೂರ್ಯಕುಮಾರ್​ ಯಾದವ್​ರಿಂದ ಶಾಕಿಂಗ್​ ಪೋಸ್ಟ್​

    ನಮ್ಮ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾದಾಗ ಈ ಸಂಸದರಿಗೆ ಯಾಕೆ ಆಕ್ರೋಶ ಹುಟ್ಟಲಿಲ್ಲ. ನದಿ ನೀರಿನ ವಿಷಯದಲ್ಲಿ ಅನ್ಯಾಯವಾದಾಗ ಏಕೆ ಇವರ ರಕ್ತ ಕುದಿಯಲಿಲ್ಲ. ನಮ್ಮ ಬಿಜೆಪಿ ಸಂಸದರುಗಳಿಗೆ ಆಕ್ರೋಶ ಬಂದು ಬೀದಿಗಿಳಿಯಬೇಕಾದರೆ ಒಂದೋ ಚುನಾವಣೆ ಬರಬೇಕು ಇಲ್ಲವಾದಲ್ಲಿ ಯಾವುದಾದರೂ ಕೋಮು ಪ್ರಚೋಧನೆ ನೀಡುವ ಘಟನೆ ನಡೆಯಬೇಕು. ಆಗ ಸಮಾಜದ ನೆಮ್ಮದಿಗೆ ಬೆಂಕಿ ಹಚ್ಚಿ ತಮ್ಮ ಮತವನ್ನು ಸುಭದ್ರಗಳಿಸಿಕೊಳ್ಳಲು ಇವರು ಬೀದಿಗಿಳಿಯುತ್ತಾರೆ ಎಂದು ಆರೋಪಿಸಿದ್ದಾರೆ.

    ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ತೇಸ್ವಿ ಸೂರ್ಯ ನಾಚಿಕೆಯಾಗಬೇಕು ನಿಮಗೆ. ಅಧಿಕಾರದಲ್ಲಿದ್ದಾಗ ಕನ್ನಡಿಗರಿಗೆ ಅನ್ಯಾಯ ಎಸಗಿ ಈಗ ಚುನಾವಣೆಗಳಿರುವಾಗ ಬೀದಿಯಲ್ಲಿ ಕುಳಿತು ಪ್ರತಿಭಟಿಸುವ ನಿಮ್ಮ ನಾಟಕ ಪ್ರಜ್ಞಾವಂತ ಕನ್ನಡಿಗರಿಗೆ ಅರ್ಥವಾಗಿದೆ. ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತದೆ, ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ನೀವು ನಾಡಿಗೂ, ಸಮಾಜಕ್ಕೂ ಕಂಟಕ ಎಂದು ದಿನೇಶ್​ ಗುಂಡೂರಾವ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts