ಸುಳ್ಯ ದಸರಾಕ್ಕೆ ದಿನೇಶ್ ಗುಂಡುರಾವ್ ಭೇಟಿ

dasara
Published on

ಸುಳ್ಯ: ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಸಭೆ ಮುಗಿದ ಬಳಿಕ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ವೇದಿಕೆಯಲ್ಲಿ ಪ್ರತಿಷ್ಠಾಪನೆಗೊಂಡ ಶ್ರೀ ಶಾರದಾ ದೇವಿಗೆ ಪೂಜೆ ಸಲ್ಲಿಸಿದರು.

ಸಚಿವರನ್ನು ಹಾಗೂ ಇತರ ಕಾಂಗ್ರೆಸ್ ಮುಖಂಡರನ್ನು ಗೌರವಿಸಲಾಯಿತು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net