More

    ಟೂರ್ನಿ ಆರಂಭಕ್ಕೂ ಮುನ್ನ ಆರ್​ಸಿಬಿಗೆ ಶಾಕ್; ಕ್ರಿಕೆಟ್​ಗೆ ವಿದಾಯ ಹೇಳಲು ಮುಂದಾದ ಸ್ಟಾರ್​ ಆಟಗಾರ

    ಚೆನ್ನೈ: ವಿಶ್ವದ ಶ್ರೀಮಂತ ಕ್ರಿಕೆಟ್​ ಟೂರ್ನಿಗಳಲ್ಲಿ ಒಂದಾದ ಇಂಡಿಯನ್​ ಪ್ರೀಮಿಯರ್​ ಲೀಗ್​ ಆರಂಭವಾಗುವುದಕ್ಕೆ ದಿನಗಣನೆ ಶುರುವಾಗಿದ್ದು, ಮಾರ್ಚ್​ 22 ರಂದು ಆರಂಭವಾಗಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಮುಖಾಮುಖಿಯಾಗಲಿವೆ.

    ಇದೀಗ ಆರ್​ಸಿಬಿ 17ನೇ ಸೀಸನ್​ ಆರಂಭಕ್ಕೆ ಸಜ್ಜಾಗಿ ನಿಂತಿದೆ. ಈ ಬಾರಿಯಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ಮೂಲಕ 16 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಅಂತ್ಯಗೊಳಿಸುತ್ತದೆಯೇ ಎಂದು ಕಾದು ನೋಡಬೇಕಿದೆ. ಆದರೆ, ಈ ನಡುವೆ ಕೇಳಿ ಬಂದಿರುವ ಮಾಹಿತಿ ಏನೆಂದರೆ ಆರ್​ಸಿಬಿ ತಂಡದ ಆಟಗಾರನೋರ್ವ ನಿವೃತ್ತಿ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ.

    ಸುದ್ದಿ ಮೂಲಗಳ ಪ್ರಕಾರ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ದಿನೇಶ್​ ಕಾರ್ತಿಕ್​ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಕೊನೆಯ ಬಾರಿಗೆ ಕಣಕ್ಕಿಳಿಯುವ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಇದು ಅವರ ಕೊನೆಯ ಐಪಿಎಲ್ ಸೀಸನ್ ಆಗಿರಲಿದೆ ಎಂದು ವರದಿಯಾಗಿದೆ.

     2024 ರ ಆವೃತ್ತಿಯು ದಿನೇಶ್ ಕಾರ್ತಿಕ್ ಅವರ ಕೊನೆಯ ಐಪಿಎಲ್ ಆಗಿರಲಿದೆ. ಈ ಬಾರಿಯ ಐಪಿಎಲ್ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಯನ್ನು ನಿರ್ಧರಿಸುತ್ತಾರೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Dinesh Karthik

    ಇದನ್ನೂ ಓದಿ: 9 ರೂ. ಕೇಳಿದ್ದಕ್ಕೆ ಕ್ಷಣಾರ್ಧದಲ್ಲೇ ಟೀ ಅಂಗಡಿ ಧ್ವಂಸ; ವರದಿ ಸಲ್ಲಿಸುವಂತೆ ಸೂಚಿಸಿದ ಸಿಎಂ

    ಐಪಿಎಲ್‌ನಲ್ಲಿ ಅತ್ಯಂತ ಅನುಭವಿ ವಿಕೆಟ್ ಕೀಪರ್ ಬ್ಯಾಟರ್‌ಗಳಲ್ಲಿ ಒಬ್ಬರಾದ ದಿನೇಶ್​ ಕಾರ್ತಿಕ್​ ಈವರೆಗೆ ಒಟ್ಟು ಅರು ತಂಡಗಳನ್ನು ಪ್ರತಿನಿಧಿಸಿದ್ದಾರೆ. 2008 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ದಿನೇಶ್ ಕಾರ್ತಿಕ್, 2011 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ ಆಡಿದ್ದರು.

    2012 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪಾಲಾದ ಡಿಕೆ 2014 ರಲ್ಲಿ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮರಳಿದ್ದರು. 2015 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. 2016-17ರಲ್ಲಿ ಗುಜರಾತ್​ ಲಯನ್ಸ್​ ಪರ ಆಡಿದ್ದ ದಿನೇಶ್ ಕಾರ್ತಿಕ್, 2018 ರಿಂದ 2021 ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ನಾಯಕನಾಗಿ ಕಾರ್ಯನಿರ್ವಹಿಸಿದ್ದರು.  2022 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿರುವ ದಿನೇಶ್​ ಕಾರ್ತಿಕ್​ ಈ ಬಾರಿಯ ಐಪಿಎಲ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆ ಹೆಚ್ಚಿದೆ.

    2022ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ದಿನೇಶ್​ ಕಾರ್ತಿಕ್​ 183.33 ರ ಸ್ಟ್ರೈಕ್-ರೇಟ್​ನೊಂದಿಗೆ 55 ರ ಸರಾಸರಿಯಲ್ಲಿ 180 ಎಸೆತಗಳನ್ನು ಎದುರಿಸಿ 330 ರನ್ ಕಲೆಹಾಕಿದ್ದರು. 023 ರಲ್ಲಿ ಆರ್​ಸಿಬಿ ಪರ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಕಳೆದ ಸೀಸನ್​ನಲ್ಲಿ 13 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್​ಗಳನ್ನು ಗಳಿಸಲು ಶಕ್ತರಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts