More

    ಧಾರವಾಡ ಲೋಕಸಭಾ ಕ್ಷೇತ್ರದಿಂದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರರಾಗಿ ಸ್ಪರ್ಧೆ ಘೋಷಣೆ

    ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆಂದು ದಿಂಗಾಲೇಶ್ವರ ಸ್ವಾಮೀಜಿ ಘೋಷಿಸಿದರು.

    ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿ ಕಣದಲ್ಲಿದ್ದಾರೆ. ಈ ನಡುವೆ ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವೀರಶೈವ ಲಿಂಗಾಯತ ಸಮುದಾಯದ ಶಿರಹಟ್ಟಿ ಮಠದ ಪೀಠಾಧಿಪತಿ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಲಿಂಗಾಯತ ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದರು.

    ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಗದಗ ಜಿಲ್ಲೆಯ ಶಿರಹಟ್ಟಿ ಮಠದ ಪೀಠಾಧಿಪತಿಯಾಗಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮದ ಭಕ್ತರು ಒತ್ತಾಯಿಸಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

    ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐದು ಲಕ್ಷಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ. ಇದೇ ಕಾರಣಕ್ಕೆ ಸ್ಪರ್ಧೆ ಮಾಡುವಂತೆ ಸ್ವಾಮೀಜಿಗೆ ವಿವಿಧ ಲಿಂಗಾಯತ ಮುಖಂಡರು ಹಾಗೂ ಭಕ್ತರು ಒತ್ತಾಯಿಸಿದ್ದರು.

    ದಿಂಗಾಲೇಶ್ವರ ಸ್ವಾಮೀಜಿ ಪರಿಚಯ

    ದಿಂಗಾಲೇಶ್ವರ ಸ್ವಾಮೀಜಿ ಅವರ ಪೂರ್ವಾಶ್ರಮ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದವರು. ವೀರಶೈವ ಲಿಂಗಾಯತ ಸಮುದಾಯದ ದಿಂಗಾಲೇಶ್ವರ ಸ್ವಾಮೀಜಿ 1995ರ ಏ. 20ರಂದು ಗದಗ ಜಿಲ್ಲೆಯ ಶಿರಹಟ್ಟಿಯ ಬಾಳೇಹೊಸೂರ ಗ್ರಾಮದ ಶ್ರೀ ದಿಂಗಾಲೇಶ್ವರಮಠದ ಆರನೇಯ ಮಠಾಧಿಪತಿಯಾದರು. ನಂತರ 2022ರಲ್ಲಿ ಶಿರಹಟ್ಟಿಯ ಶ್ರೀ ಜಗದ್ಗುರು ಫಕ್ಕೀರೇಶ್ವರ ಮಠಕ್ಕೆ ಉತ್ತರಧಿಕಾರಿಯಾಗಿ ನೇಮಕವಾದರು. ಅಂದಿನಿಂದ ಶಿರಹಟ್ಟಿಯ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಎಂದೇ ಪ್ರಖ್ಯಾತರಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts